Breaking
23 Mar 2026, Mon

ಚಿಕ್ಕಮಗಳೂರಿನಲ್ಲಿ ಸೆಲ್ಫಿ ತೆಗೆಯಲು ಹೋಗಿ ಜಲಪಾತಕ್ಕೆ ಬಿದ್ದು ಯುವಕ ಸಾವು

ಚಿಕ್ಕಮಗಳೂರು: ಸೆಲ್ಫಿ ತೆಗೆಯಲು ಹೋಗಿ ಜಲಪಾತಕ್ಕೆ ಬಿದ್ದು ಯುವಕ ಮೃತಪಟ್ಟಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಕಾಮೇನಹಳ್ಳಿ ಜಲಪಾತದಲ್ಲಿ ನ.14 ನಡೆದಿದೆ.

ವರುಣ್ ದೇಸಾಯಿ (19) ಮೃತ ಯುವಕ.

ವರುಣ್ ಮೂಲತಃ ಬೆಳಗಾವಿ ಜಿಲ್ಲೆಯವನಾಗಿದ್ದು, ಚಿಕ್ಕಮಗಳೂರು ನಗರದ ಖಾಸಗಿ ಕಾಲೇಜಿನಲ್ಲಿ ಮೊದಲ ವರ್ಷದ ಇಂಜಿನಿಯರಿಂಗ್ ವಿದ್ಯಾಭ್ಯಾಸ ಮಾಡುತ್ತಿದ್ದ.

ಶುಕ್ರವಾರ ಬೆಳಿಗ್ಗೆ ಎರಡು ಬೈಕ್ ನಲ್ಲಿ ಐವರು ಸ್ನೇಹಿತರು ಜಲಪಾತ ನೋಡಲು ತೆರಳಿದ್ದರು. ಜಲಪಾತದ ಬಳಿ ಸೆಲ್ಫಿ ಕ್ಲಿಕ್ಕಿಸುವಾಗ ಕಾಲು ಜಾರಿ ಜಲಪಾತಕ್ಕೆ ಬಿದ್ದು ಯುವಕ ಮೃತಪಟ್ಟಿದ್ದಾನೆ. ಪೊಲೀಸರು, ಅಗ್ನಿಶಾಮಕ ದಳ ಸಿಬ್ಬಂದಿಗಳು ಮೃತದೇಹಕ್ಕಾಗಿ ಶುಕ್ರವಾರ ರಾತ್ರಿವರೆಗೂ ಶೋಧ ನಡೆಸಿದ್ದು ಇಂದು ಬೆಳಿಗ್ಗೆ ಯುವಕನ ಮೃತದೇಹ ಪತ್ತೆಯಾಗಿದೆ.

ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *