Breaking
23 Mar 2026, Mon

ಪುತ್ತೂರಿನಲ್ಲಿ ನ.19ಕ್ಕೆ ಅಟಲ್ ವಿರಾಸತ್ : ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಸಭೆ

ಪುತ್ತೂರು: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮಶತಾಬಿಯ ಅಂಗವಾಗಿ ನ.19 ರಂದು ಪುತ್ತೂರಿನಲ್ಲಿ ನಡೆಯಲಿರುವ ಜಿಲ್ಲಾ ಮಟ್ಟದ ಅಟಲ್ ವಿರಾಸತ್ ಕಾರ್ಯಕ್ರಮದ ಹಿನ್ನಲೆಯಲ್ಲಿ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಅವರ ನೇತೃತ್ವದಲ್ಲಿ ಪುತ್ತೂರು ಶ್ರೀ ಲಕ್ಷ್ಮೀವೆಂಕಟರಮಣ ದೇವಸ್ಥಾನದ ಸುಕೃತೀಂದ್ರ ಕಲಾ ಮಂದಿರದಲ್ಲಿ ಪೂರ್ವ ಸಿದ್ಧತಾ ಸಭೆಯು ನ.15 ರಂದು ನಡೆಯಿತು.ಸಭೆಯಲ್ಲಿ ಕಾರ್ಯಕ್ರಮದ ಒಟ್ಟು ರೂಪುರೇಷೆಯನ್ನು ತಿಳಿಸಲಾಯಿತು.


ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯ ಕಿಶೋರ್ ಪುತ್ತೂರು, ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ನಗರ ಮಂಡಲ ಅಧ್ಯಕ್ಷ ಶಿವಕುಮಾರ್ ಕಲ್ಲಿಮಾರು, ಗ್ರಾಮಾಂತರ ಮಂಡಲ ಅಧ್ಯಕ್ಷ ದಯಾನಂದ ಉಜಿರೆಮಾರು, ಬಿಜೆಪಿ ಮುಖಂಡ ಗೋಪಾಲಕೃಷ್ಣ ಹೇರಳೆ,ಸಹಿತ ಜಿಲ್ಲಾ ಮಟ್ಟದ ಪದಾಧಿಕಾರಿಗಳು ವೇದಿಕೆಯಲ್ಲಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *