Breaking
26 Sep 2026, Sat

ಕಬಕದ ಸರಕಾರಿ ಪ್ರೌಢಶಾಲೆಯಲ್ಲಿ ಪೋಷಕರಿಗೆ ಅರಿವು ಕಾರ್ಯಕ್ರಮ

ಪುತ್ತೂರು: ಲಯನ್ಸ್ ಕ್ಲಬ್ ಪುತ್ತೂರು, ಅಬ್ಬಕ್ಕ ರಾಣಿ ಗೈಡ್ಸ್ ದಳ ಕಬಕ, ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ ಪುತ್ತೂರು ಘಟಕ, ತುಳುಅಪ್ಪೆಕೂಟ ಪುತ್ತೂರು ಸಹಯೋಗದಲ್ಲಿ ಸರಕಾರಿ ಪ್ರೌಢಶಾಲೆ ಕಬಕದ ಆಶ್ರಯದಲ್ಲಿ ಪೋಷಕರಿಗೆ ಅರಿವು ಕಾರ್ಯಕ್ರಮವು ಸರಕಾರಿ ಪ್ರೌಢಶಾಲೆ ಕಬಕದಲ್ಲಿ ನ. 14 ರಂದು ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಎಸ್.ಡಿ.ಎಂ.ಸಿ.ಅಧ್ಯಕ್ಷರಾದ ಹೈದರ್ ರವರು ವಹಿಸಿದ್ದರು. ಮುಖ್ಯ ಶಿಕ್ಷಕಿ ಸುರೇಖ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಸಂಪನ್ಮೂಲ ವ್ಯಕ್ತಿಯಾಗಿ ಪುತ್ತೂರಿನ ಖ್ಯಾತ ವಕೀಲರು, ತುಳುಅಪ್ಪೆಕೂಟದ ಅಧ್ಯಕ್ಷರಾದ ಹರಿಣಾಕ್ಷಿ ಜೆ ಶೆಟ್ಟಿ ಅವರು ಮಾತನಾಡಿ ಮಕ್ಕಳ ರಕ್ಷಣಾ ನೀತಿ, ಪೋಕ್ಸೋ ಕಾಯಿದೆ ಬಗ್ಗೆ ಸಮಗ್ರ ಮಾಹಿತಿ ನೀಡಿದರು.

ಲಯನ್ ಅಧ್ಯಕ್ಷ ರಾದ ಪ್ರೇಮಲತಾರಾವ್ ಅವರು ಬಾಲ್ಯ ವಿವಾಹ ನಿಷೇಧ ಮತ್ತು ಬಾಲಕಾರ್ಮಿಕ ನಿಷೇಧ ನೀತಿಗಳ ಬಗ್ಗೆ ಮಾಹಿತಿ ನೀಡಿದರು. ಮುಖ್ಯ ಅತಿಥಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ,ಅಂತರಾಷ್ಟ್ರೀಯ ಲಯನ್ಸ್ ಕ್ಲಬ್ ಜಿಲ್ಲೆ 317Dಇದರ ಜಿಲ್ಲಾ ಸಂಪರ್ಕಾಧಿಕಾರಿ ವಿ.ಎನ್.ಸುದರ್ಶನ್ ಪಡಿಯಾರ್ ಮಕ್ಕಳ ಹಕ್ಕುಗಳ ಬಗ್ಗೆ ಮಾಹಿತಿ ನೀಡಿದರು.

ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ಲಯನ್ಸ್ ತ್ರಿವೇಣಿ ಪೆರುವೋಡಿ,ಎಸ್.ಡಿ.ಎಂ.ಸಿ.ಸ್ಥಳೀಯ ಪ್ರತಿನಿಧಿ ಶಾಭಾ.ಕೆ,ಸ್ಥಾಯಿ ಸಮಿತಿ ಸದಸ್ಯ ಅಬ್ದುಲ್ ಖಾದರ್ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಎಸ್.ಡಿ.ಎಂ.ಸಿ. ಸದಸ್ಯರು ಪೋಷಕರು ಭಾಗವಹಿಸಿದರು. ಈ ವೇಳೆ ಕಾರ್ಯಕ್ರಮದ ಮುಖ್ಯ ಅತಿಥಿಗಳನ್ನು ಗೌರವಿಸಲಾಯಿತು.

ಲಯನ್ಸ್ ಕ್ಲಬ್ ವತಿಯಿಂದ ವಿದ್ಯಾರ್ಥಿಗಳಿಗೆ, ಪೋಷಕರಿಗೆ ಸಿಹಿತಿಂಡಿ ವಿತರಿಸಲಾಯಿತು. ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ ಪುತ್ತೂರು ಘಟಕದ ಅಧ್ಯಕ್ಷೆ ಗೈಡ್ಸ್ ಶಿಕ್ಷಕಿ ಶಾಂತಾ ಪುತ್ತೂರು ಕಾರ್ಯಕ್ರಮ ನಿರೂಪಿಸಿದರು. ದೈಹಿಕ ಶಿಕ್ಷಣ ಶಿಕ್ಷಕ ಧನ್ಯವಾದವಿತ್ತರು.ಶಿಕ್ಷಕರಾದ ಯಶೋಧ, ಸ್ವಪ್ನ ಕೆ ,ಬಿ.ಇಡಿ ಪ್ರಶಿಕ್ಷಣಾರ್ಥಿಗಳಾದ ಅಮರೇಶ್ ಭವ್ಯ ಸಹಕರಿಸಿದರು.

Leave a Reply

Your email address will not be published. Required fields are marked *