Breaking
12 Aug 2026, Wed

ಕಡಬದಲ್ಲಿ ಮಹಿಳೆಗೆ ಕಿರುಕುಳ ಯತ್ನ: ಆರೋಪಿಗೆ ನ್ಯಾಯಾಂಗ ಬಂಧನ

ಮಂಗಳೂರು: ಮಹಿಳೆಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಲು ಯತ್ನಿಸಿದ ವ್ಯಕ್ತಿಯನ್ನು ಕಡಬ ಠಾಣಾ ಪೊಲೀಸರು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.

ಬಂಧಿತ ಆರೋಪಿಯನ್ನು ಕಡಬ ನಿವಾಸಿ ಉಮೇಶ್ ಗೌಡ ಎಂದು ಗುರುತಿಸಲಾಗಿದೆ.

ನ.13ರಂದು ರಾತ್ರಿ ಸಂತ್ರಸ್ತ ಮಹಿಳೆ ಮನೆಯ ಹೊರ ಭಾಗದ ಕೊಟ್ಟಿಗೆಯಲ್ಲಿ ನಿದ್ರಿಸುತ್ತಿದ್ದ ವೇಳೆ ಆರೋಪಿಯು ಅಕ್ರಮವಾಗಿ ಪ್ರವೇಶಿಸಿ ಲೈಂಗಿಕ ಕಿರುಕುಳ ನೀಡಲು ಯತ್ನಿಸಿದ್ದಾನೆ. ಈ ವೇಳೆ ಮಹಿಳೆ ಸಹಾಯಕ್ಕಾಗಿ ಬೊಬ್ಬೆ ಹಾಕಿದ ಕಾರಣ ಮನೆಯಲ್ಲಿದ್ದ ಆಕೆಯ ಪತಿ, ಮಕ್ಕಳು ಬಂದು ಆರೋಪಿಯನ್ನು ಹಿಡಿಯಲು ಯತ್ನಿಸಿದಾಗ, ಆರೋಪಿಯು ಹಲ್ಲೆ ನಡೆಸಿ, ಮಹಿಳೆಗೆ ಜಾತಿ ನಿಂದನೆ ಮಾಡಿರುವುದಾಗಿ ದೂರಿನಲ್ಲಿ ತಿಳಿದ್ದಾರೆ.

Leave a Reply

Your email address will not be published. Required fields are marked *