Breaking
26 Sep 2026, Sat

ಕಾರು ಹಾಗೂ ಥಾರ್ ಜೀಪಿನ ನಡುವೆ ಅಪಘಾತ: ಮಹಿಳೆ ಸಾವು, ನಾಲ್ವರಿಗೆ ಗಾಯ

ಕಾಸರಗೋಡು: ರಾಷ್ಟ್ರೀಯ ಹೆದ್ದಾರಿಯ ಬಂದ್ಯೋಡು ಸಮೀಪದ ಮುಟ್ಟಂನಲ್ಲಿ ಆಲ್ಟೋ ಕಾರು ಹಾಗೂ ಥಾರ್ ಜೀಪಿನ ಅಪಘಾತದಲ್ಲಿ ಮಹಿಳೆಯೋರ್ವರು ಮೃತಪಟ್ಟು, ನಾಲ್ವರು ಗಾಯಗೊಂಡ ಘಟನೆ ನ.16 ರಂದು ರಾತ್ರಿ ನಡೆದಿದೆ.

ಮೃತಪಟ್ಟ ಮಹಿಳೆಯನ್ನು ಮಂಜೇಶ್ವರ ಮಚ್ಚಂಪಾಡಿ ಕೋಡಿಯ ಸಿ. ಪಿ ಫಾತಿಮ್ಮತ್ ಮಿರ್ಜನಾ (28) ಎಂದು ಗುರುತಿಸಲಾಗಿದೆ.

ಕಾರಿನಲ್ಲಿದ್ದ ಮಚ್ಚಂಪಾಡಿಯ ಹುಸೈನ್ ಸಹದಿ, ಮರಿಯಮ್ಮತ್ ಝಕಿಯ್ಯಾ, ಜುಮಾನ ಮತ್ತು ಅಬ್ದುಲ್ ಸಾಲಿಂ ಎಂಬವರು ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳ ಪೈಕಿ ಇಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ.

ಮುಂದಿನಿಂದ ಚಲಿಸುತ್ತಿದ್ದ ಕಾರು ಒಮ್ಮೆಲೇ ಬ್ರೇಕ್ ಹಾಕಿದ ಸಂದರ್ಭದಲ್ಲಿ ಹಿಂದಿನಿಂದ ಬರುತ್ತಿದ್ದ ಥಾರ್ ಜೀಪ್‌ ಚಾಲಕನ ನಿಯಂತ್ರಣ ತಪ್ಪಿ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ.

ಈ ಕುರಿತು ಕುಂಬಳೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *