Breaking
26 Sep 2026, Sat

ಅಕ್ರಮ ಗೋಹತ್ಯೆ ಅಡ್ಡೆಗೆ ಪೊಲೀಸರ ದಾಳಿ: ಇಬ್ಬರು ಪರಾರಿ, ಓವ೯ ಪೊಲೀಸ್ ವಶಕ್ಕೆ

ಬಂಟ್ವಾಳ : ತಾಲೂಕಿನ ಅರಳ ಗ್ರಾಮದಲ್ಲಿ ಅಕ್ರಮ ಗೋಹತ್ಯೆ ಅಡ್ಡೆಗೆ ಪೊಲೀಸರು ದಾಳಿ ನಡೆಸಿದ್ದಾರೆ.

ನ.16ರಂದು ಸಿಕ್ಕ ಗುಪ್ತ ಮಾಹಿತಿಯ ಮೇರೆಗೆ ಪೊಲೀಸರು ದಾಳಿ ನಡೆಸಿದಾಗ, ಮನೆಯ ಆವರಣದಲ್ಲಿರುವ ಶೆಡ್‌ನಲ್ಲಿ ಮೂವರು ದನವನ್ನು ವಧೆ ಮಾಡಿ ಮಾಂಸ ಮಾಡುತ್ತಿರುವುದು ಪತ್ತೆಯಾಗಿದೆ. ಘಟನಾ ಸ್ಥಳದಲ್ಲಿ ಒಬ್ಬರನ್ನು ವಶಕ್ಕೆ ಪಡೆಯಲಾಗಿದ್ದು, ಇಬ್ಬರು ಪರಾರಿಯಾಗಿದ್ದಾರೆ.

ಬಂಧಿತ ಆರೋಪಿಯನ್ನು ಮೈಯದಿ ಎಂದು ಗುರುತಿಸಲಾಗಿದೆ. ಪೊಲೀಸರು ಶೆಡ್‌ ಹಾಗೂ ಮನೆಯ ಆವರಣವನ್ನು ಜಪ್ತಿ ಮಾಡಿದ್ದಾರೆ.

ಸದ್ಯ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಪರಾರಿಯಾದ ಇಬ್ಬರು ಆರೋಪಿಗಳಿಗಾಗಿ ಪತ್ತೆ ಕಾರ್ಯ ಮುಂದುವರಿದಿದೆ.

Leave a Reply

Your email address will not be published. Required fields are marked *