Breaking
23 Mar 2026, Mon

ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಆಟೋ: ಓರ್ವ ಬಾಲಕ ಸಾವು

ಬೆಳ್ತಂಗಡಿ: ತಾಲೂಕಿನ ಲಾಯಿಲ ಗ್ರಾಮದ ಕುತ್ರೋಟ್ಟು-ಟಿ.ಬಿ.ಕ್ರಾಸ್ ರಸ್ತೆಯ ಹೊಕ್ಕಿಲದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಆಟೋ ಪಲ್ಟಿಯಾದ ಪರಿಣಾಮ ಓರ್ವ ಬಾಲಕ ಮೃತಪಟ್ಟ ಘಟನೆ ನ.16 ರಂದು ನಡೆದಿದೆ.

ಮೃತಪಟ್ಟ ಬಾಲಕನನ್ನು ಬೆಳ್ತಂಗಡಿ ತಾಲೂಕಿನ ನಾವೂರು ಗ್ರಾಮದ ಕುಂಡಡ್ಕ ನಿವಾಸಿ, ಗಣೇಶ್ ಅವರ ಪುತ್ರ ತನ್ವಿತ್(12) ಎಂದು ಗುರುತಿಸಲಾಗಿದೆ.

ಧರ್ಮಸ್ಥಳದ ಲಕ್ಷ ದೀಪೋತ್ಸವಕ್ಕೆ ನಾವೂರಿನ ಶಶಿ ಎಂಬವರ ಆಟೋದಲ್ಲಿ ತೆರಳುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಅಪಘಾತದಲ್ಲಿ ಬಾಲಕ ಸಾವನ್ನಪ್ಪಿದ್ದು ಗಾಯಗೊಂಡಿದ್ದ ಐದು ಮಂದಿಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

Leave a Reply

Your email address will not be published. Required fields are marked *