Breaking
10 May 2026, Sun

ಬೆಳಗಾವಿ ಮೃಗಾಲಯದಲ್ಲಿ ಒಂದೇ ದಿನ ಉಸಿರುಚೆಲ್ಲಿದ 20 ಕೃಷ್ಣ ಮೃಗಗಳು

ಬೆಳಗಾವಿ: ಕೇವಲ ಎರಡು ದಿನಗಳ ಅವಧಿಯಲ್ಲಿ ಒಟ್ಟು 28 ಕೃಷ್ಣ ಮೃಗಗಳು ಏಕಾಏಕಿ ಮೃತಪಟ್ಟ ಘಟನೆ ಬೆಳಗಾವಿ ತಾಲೂಕಿನ ಭೂತರಾಮನಹಟ್ಟಿ ಗ್ರಾಮದಲ್ಲಿರುವ ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿ ನಡೆದಿದೆ.

ನ.13 ರಂದು ಮೃಗಾಲಯದಲ್ಲಿ 8 ಕೃಷ್ಣ ಮೃಗಗಳು ಸಾವನ್ನಪ್ಪಿದ್ದವು. ಆದರೆ, ನ. 16ರಂದು ಒ೦ದೇ ದಿನ 20 ಕೃಷ್ಣ ಮೃಗಗಳು ಮತ್ತೆ ಮೃತಪಟ್ಟಿದೆ.

ನ. 13 ರಂದು ಸಾವನ್ನಪ್ಪಿದ್ದ ಕೃಷ್ಣಮೃಗಗಳ ಮರಣೋತ್ತರ ಪರೀಕ್ಷೆ ನಡೆಸಿ, ಸ್ಯಾಂಪಲ್ ಸಂಗ್ರಹಿಸಿ ಮೈಸೂರಿನ ಲ್ಯಾಬ್‌ಗೆ ರವಾನೆ ಮಾಡಲಾಗಿದ್ದು, ಲ್ಯಾಬ್‌ನಿಂದ ವರದಿ ಬರುವ ಮುನ್ನವೆ ಮತ್ತೆ 20 ಕೃಷ್ಣಮೃಗಗಳು ಸಾವನ್ನಪ್ಪಿದ್ದು, ಆತಂಕಕ್ಕೆ ಕಾರಣವಾಗಿದೆ.

ಪ್ರಾಥಮಿಕ ಮಾಹಿತಿಯ ಪ್ರಕಾರ, ಕೃಷ್ಣ ಮೃಗಗಳು ಬ್ಯಾಕ್ಟೀರಿಯಾ ಸೋಂಕಿನಿಂದ ಸಾವನ್ನಪ್ಪಿರುವ ಸಾಧ್ಯತೆ ಇದೆ ಎ೦ದು ಅಧಿಕಾರಿಗಳು ಶಂಕೆ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಅಧಿಕಾರಿಗಳು ತನಿಖೆ ನಡೆಸುತ್ತಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.

Leave a Reply

Your email address will not be published. Required fields are marked *