Breaking
26 Sep 2026, Sat

ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಮೂವರು ಆರೋಪಿಗಳ ಬಂಧನ

ಮಂಗಳೂರು: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

ಬಂಧಿತರನ್ನು ಮನ್ಸೂರ್ ಅದ್ಯಪಾಡಿ ಅಲಿಯಾಸ್ ಮೊಹಮ್ಮದ್ ಮನ್ಸೂರ್, ಮೊಹಮ್ಮದ್ ಅಶ್ವದ್, ಮತ್ತು ಅಬ್ದುಲ್ ಮೊಹಮ್ಮದ್ ನಿಶಾಮ್ ಎಂದು ಗುರುತಿಸಲಾಗಿದೆ.

ನ.15ರಂದು ಮೂಡಬಿದ್ರೆ ತಾಲೂಕಿನ ಹೊಸ್ಮಾರು-ನೆಲ್ಲಿಕಾರು ಕಡೆಯಿಂದ ಟಾಟಾ ಎಸಿ ಕಂಟೈನರ್ ವಾಹನದಲ್ಲಿ ಮೂರು ಜಾನುವಾರುಗಳನ್ನು ಅಕ್ರಮವಾಗಿ ಸಾಗಿಸುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಪೊಲೀಸರು ವಾಹನವನ್ನು ತಡೆದು ತಪಾಸಣೆ ನಡೆಸಿ ಮೂವರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಈ ಕುರಿತು ಮೂಡಬಿದ್ರೆ ಠಾಣೆಯಲ್ಲಿ ಸೇರಿದಂತೆ ವಿಭಿನ್ನ ಠಾಣೆಯಲ್ಲಿ ಪ್ರಕರಣಗಳು ದಾಖಲಾಗಿದ್ದು ಮನ್ಸೂರ್ ಅವರ ವಿರುದ್ಧ ಇದು 30ನೇ ಪ್ರಕರಣವಾಗಿದೆ ಎಂದು ತಿಳಿದುಬಂದಿದೆ.

Leave a Reply

Your email address will not be published. Required fields are marked *