Breaking
26 Sep 2026, Sat

ಆಲಾಡಿ ಸ. ಹಿ. ಪ್ರಾ. ಶಾಲೆ ಸಜೀಪ ಮುನ್ನೂರಿನಲ್ಲಿ ಸಜಿಪಮೂಡ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ

ಬಂಟ್ವಾಳ: ಆಲಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಸಜೀಪ ಮುನ್ನೂರಿನಲ್ಲಿ ನ. 17ರಂದು ಸಜಿಪಮೂಡ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ನಡೆಯಿತು.

2025 -26 ನೇ ಸಾಲಿನ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯನ್ನು ಸಜೀಪ ಮಾಗಣೆ ತಂತ್ರಿ ಎಂ ಸುಬ್ರಹ್ಮಣ್ಯ ಭಟ್ ದೀಪ ಬೆಳಗಿಸಿ ಉದ್ಘಾಟಿಸಿದರು.

ಬಳಿಕ ಮಾತನಾಡಿದ ಅವರು ಮಕ್ಕಳು ಸ್ಪರ್ಧೆಯಲ್ಲಿ ಭಾಗವಹಿಸಿ ಶಾಲೆಗೆ, ಊರಿಗೆ, ಹೆತ್ತವರಿಗೆ ಒಳ್ಳೆಯ ಕೀರ್ತಿ ಬರುವಂತೆ ಮಾಡಬೇಕು. ಇಲಾಖೆಯ ನಿರ್ದೇಶನದಂತೆ ಕಾರ್ಯಕ್ರಮ ಯಶಸ್ವಿಯಾಗಲಿ ಎಂದು ಶುಭ ಹಾರೈಸಿದರು.

ಈ ಸಂದರ್ಭ ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷ ಅಬ್ದುಲ್ ಖಾದರ್, ಸಿಆರ್‌ಪಿ ಇಂದಿರಾ ಶಾಲಾ ಮುಖ್ಯೋಪಾಧ್ಯಾ ಯಿನಿ ರೋಹಿಣಿ, ಉದ್ಯಮಿ ಕಬೀರ ಹಾಗೂ ಅಬ್ದುಲ್ ಕೇರಿಂ, ಪಂಚಾಯಿತಿ ಸದಸ್ಯರಾದ ಶಶಿಕಲಾ, ಸುಂದರ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು.

14 ಶಾಲೆಗಳ ವಿದ್ಯಾರ್ಥಿಗಳು ಪ್ರತಿಭಾ ಕಾರಂಜಿಯಲ್ಲಿ ಪಾಲ್ಗೊಂಡಿದ್ದರು.

Leave a Reply

Your email address will not be published. Required fields are marked *