ಬೆಳಗಾವಿ: ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿ ಕೃಷ್ಣ ಮೃಗಗಳ ಸರಣಿ ಸಾವಿನ ಬೆನ್ನಲ್ಲೇ ಮೃಗಾಲಯದ ಸುತ್ತಮುತ್ತಲಿನ ಗ್ರಾಮಗಳಲ್ಲಿಯೂ ಸಾಂಕ್ರಾಮಿಕ ರೋಗದ ಆತಂಕ ಹೆಚ್ಚಾಗಿದೆ.

38 ಕೃಷ್ಣಮೃಗಗಳ ಪೈಕಿ 31 ಮೃತಪಟ್ಟಿದ್ದು “ಗಳಲೆ” ರೋಗದಿಂದ ಘಟನೆ ನಡೆದಿರುವ ಶಂಕೆ ವ್ಯಕ್ತವಾಗಿದೆ. ಈ ರೋಗ ಸುತ್ತಲಿನ ಪರಿಸರದಲ್ಲೂ ಹರಡುವ ಸಾಧ್ಯತೆ ಇದ್ದು ಪ್ರಾಣಿಗಳನ್ನ ಸಾಕಿರುವವರು ಎಚ್ಚರಿಕೆ ವಹಿಸಲು ಸೂಚಿಸಲಾಗಿದೆ.

ಮೃತ ಕೃಷ್ಣ ಮೃಗಗಳ ಕಿಡ್ನಿ, ಹಾರ್ಟ್, ಲಿವರ್, ರಕ್ತ ಎಲ್ಲವನ್ನೂ ವೈದ್ಯರು ಈಗಾಗಲೇ ಸ್ಯಾಂಪಲ್ ಪಡೆದಿದ್ದು ಅವನ್ನು ಲ್ಯಾಬ್ಗೆ ಕಳುಹಿಸಿಕೊಡಲಾಗಿತ್ತು. ಮರಣೋತ್ತರ ಪರೀಕ್ಷೆಯ ವರದಿ ಇಂದು ಹೊರಬರಲಿದ್ದು, ಮಧ್ಯಾಹ್ನದ ವೇಳೆಗೆ ಸಾವಿಗೆ ನಿಖರ ಕಾರಣ ತಿಳಿಯುವ ಸಾಧ್ಯತೆ ಇದೆ.
ಕೃಷ್ಣಮೃಗಗಳು ಮೃತಪಟ್ಟ ಪ್ರದೇಶವನ್ನು ಮೃಗಾಲಯದ ಸಿಬ್ಬಂದಿ ನಿರ್ಬಂಧಿಸಿದ್ದು, ಸಾರ್ವಜನಿಕರ ಓಡಾಟಕ್ಕೆ ನಿರ್ಬಂಧಿಸಲಾಗಿದೆ.




