Breaking
28 Jun 2026, Sun

ಬೆಳ್ತಂಗಡಿ : 18 ಅಡಿ ಎತ್ತರದಿಂದ ಬಿದ್ದಿದ್ದ ಪೈಂಟರ್ ಮೃತ್ಯು

ಬೆಳ್ತಂಗಡಿ : ಬೆನ್ನು ಮೂಳೆ ಮುರಿತಕ್ಕೊಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪೈಂಟರ್ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಬೆಳ್ತಂಗಡಿಯಲ್ಲಿ ನ.17ರಂದು ನಡೆದಿದೆ.

ಉಜಿರೆ ರೆಂಜಾಳ ನಿವಾಸಿ ಪ್ರಮೋದ್ ಗೌಡ (37) ಮೃತ ದುರ್ದೈವಿ.

ಕಳೆದ ಒಂದು ತಿಂಗಳ ಹಿಂದೆ ಪೈಂಟಿಂಗ್ ಕೆಲಸ ಮಾಡುತ್ತಿದ್ದ ಪ್ರಮೋದ್ ಗೌಡ ಅವರು 18 ಅಡ್ಡಿ ಎತ್ತರದಿಂದ ಬಿದ್ದು ಬೆನ್ನು ಮೂಳೆ ಮುರಿತಕ್ಕೊಳಗಾಗಿ ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಆದರೆ ಸೋಮವಾರದಂದು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

ಮೃತರು ಪತ್ನಿ, ಪುತ್ರಿಯನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *