ಸೌದಿ ಅರೇಬಿಯಾ: ಮೆಕ್ಕಾದಿಂದ ಮದೀನಾಗೆ ತೆರಳುತ್ತಿದ್ದ ಉಮ್ರಾ ಯಾತ್ರಿಕರ ಬಸ್ ಹೊತ್ತಿ ಉರಿದು 40 ಕ್ಕೂ ಹೆಚ್ಚು ಯಾತ್ರಿಕರು ಸಜೀವ ದಹನವಾಗಿರುವ ಘಟನೆ ನ. 17ರಂದು ಸೌದಿ ಅರೇಬಿಯಾದ ಮೆಕ್ಕಾ ಬಳಿಯ ಅಲ್ ಮುಫ್ರಿಹಾತ್‌ನಲ್ಲಿ ಸಂಭವಿಸಿದೆ.

ಮೆಕ್ಕಾದಲ್ಲಿ ತಮ್ಮ ಉಮ್ರಾ ವಿಧಿಗಳನ್ನು ಪೂರ್ಣಗೊಳಿಸಿ ಮದೀನಾಕ್ಕೆ ತೆರಳುತ್ತಿದ್ದಾಗ ಯಾತ್ರಿಕರ ಬಸ್ ಡೀಸೆಲ್ ಟ್ಯಾಂಕರ್‌ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಬೆಂಕಿ ಹತ್ತಿಕೊಂಡು ಬಸ್ ಹೊತ್ತಿ ಉರಿದಿದೆ.

ಘಟನೆಯಲ್ಲಿ ಹೈದರಾಬಾದ್ ಮೂಲದ ನಿವಾಸಿ ಮೊಹಮ್ಮದ್ ಅಬ್ದುಲ್ ಶೋಯೆಬ್ (24) ಬಚಾವ್ ಆಗಿದ್ದು ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ದುರಂತದಲ್ಲಿ ಭಾರತದ ಒಂದೇ ಕುಟುಂಬದ 18 ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.




