Breaking
26 Jun 2026, Fri

ಕೋಟ್ಯಂತರ ರೂ. ವಂಚನೆ ಪ್ರಕರಣ: ಓರ್ವ ಆರೋಪಿ ಬಂಧನ

ಉಡುಪಿ: ಕೋಟ್ಯಂತರ ರೂ. ವಂಚನೆ ಎಸಗಿರುವ ಓರ್ವ ಆರೋಪಿಯನ್ನು ಕೋಟ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಸಂಘದ ಕಾವಡಿ ಶಾಖೆಯ ಪ್ರಭಾರ ಮ್ಯಾನೇಜರ್, ಹೆಗ್ಗುಂಜೆ ಗ್ರಾಮದ ಜಾನುವಾರಕಟ್ಟೆ ನಿವಾಸಿ ಸುರೇಶ್ ಭಟ್(38) ಎಂದು ಗುರುತಿಸಲಾಗಿದೆ.

ಸಾಬರಕಟ್ಟೆಯಲ್ಲಿರುವ ಶಿರಿಯಾರ ಸೇವಾ ಸಹಕಾರಿ ಸಂಘದ ಕಾವಡಿ ಶಾಖೆಯಲ್ಲಿ ಸುರೇಶ್ ಭಟ್ ಹಾಗೂ ಶಾಖೆಯ ಕಿರಿಯ ಗುಮಾಸ್ತ ಹರೀಶ್ ಕುಲಾಲ್ ಇಬ್ಬರು ಸೇರಿ ಸುಮಾರು 1.70 ಕೋಟಿ ರೂ. ಹಣ ವಂಚಿಸಿ ತಲೆಮರೆಸಿಕೊಂಡಿದ್ದರು ಈ ಕುರಿತು ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಉಡುಪಿ ಪೊಲೀಸ್ ಉಪಾಧೀಕ್ಷಕ ಪ್ರಭು ಡಿ.ಟಿ. ಹಾಗೂ ಬ್ರಹ್ಮಾವರ ವೃತ್ತ ನಿರೀಕ್ಷಕ ಗೋಪಿಕೃಷ್ಣ ಮಾರ್ಗದರ್ಶನದಲ್ಲಿ ತನಿಖೆ ನಡೆಸಿದ ಕೋಟ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕರಾದ ಪ್ರವೀಣ ಕುಮಾರ್ ಹಾಗೂ ಮಾಂತೇಶ್ ಜಾಭಗೌಡ ಮತ್ತು ಸಿಬ್ಬಂದಿ ಕೃಷ್ಣ ಶೇರೆಗಾರ, ಶ್ರೀಧರ್, ವಿಜಯೇಂದ್ರ ತಂಡ ಆರೋಪಿಯನ್ನು ಬಂಧಿಸಿದೆ.

ಇನ್ನೋರ್ವ ಆರೋಪಿ ಹರೀಶ್‌ ಕುಲಾಲ್‌ ತಲೆಮರೆಸಿಕೊಂಡಿದ್ದು, ಆತನಿಗಾಗಿ ಶೋಧ ಕಾರ್ಯ ಮುಂದುವರೆದಿದೆ.

Leave a Reply

Your email address will not be published. Required fields are marked *