ಉಡುಪಿ: ಹಿಂದೂ ಜಾಗರಣಾ ವೇದಿಕೆಯ ಮುಖಂಡ ಅಜೆಕಾರು ಮರ್ಣೆ ನಡಿಬೆಟ್ಟು ನಿವಾಸಿ ರತ್ನಾಕರ್ ಅಮೀನ್ (49) ಅವರನ್ನು ಪ್ರತಿಭಟನಾ ಸಭೆಯಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಮೇಲೆ ಉಡುಪಿ ಪೊಲೀಸರು ನ. 18 ರಂದು ಬಂಧಿಸಿ, ನ್ಯಾಯಲಯಕ್ಕೆ ಹಾಜರುಪಡಿಸಿದ್ದಾರೆ.

ದೆಹಲಿಯ ಬಾಂಬ್ ಸ್ಪೋಟ ಕೃತ್ಯವನ್ನು ಖಂಡಿಸಿ ಹಿಂದೂ ಜಾಗರಣಾ ವೇದಿಕೆ ಉಡುಪಿ ವತಿಯಿಂದ ನ.15ರಂದು ಉಡುಪಿ ನಗರದ ಜಟ್ಕಾ ನಿಲ್ದಾಣದ ಬಳಿ ಪ್ರತಿಭಟನಾ ಸಭೆಯನ್ನು ಆಯೋಜಿಸಲಾಗಿದ್ದು ಈ ಪ್ರತಿಭಟನೆಯಲ್ಲಿ ರತ್ನಾಕರ ಅಮೀನ್ ಅವರು ಧರ್ಮಗಳ ನಡುವೆ ದ್ವೇಷ ಹುಟ್ಟು ಹಾಕುವಂತಹ ಪ್ರಚೋದನಾಕಾರಿ ಭಾಷಣ ಮಾಡಿದ್ದು, ಈ ಬಗ್ಗೆ ರತ್ನಾಕರ ಅಮೀನ್ ವಿರುದ್ಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣ ದಾಖಲಾದ ಬಳಿಕ ಈ ಬಗ್ಗೆ ತನಿಖೆ ಕೈಗೊಂಡ ಉಡುಪಿ ನಗರ ಠಾಣೆಯ ಪೊಲೀಸ್ ನಿರೀಕ್ಷಕ ಮಂಜುನಾಥ್ ವಿ. ಬಡಿಗೇರ ನೇತೃತ್ವದ ವಿಶೇಷ ತಂಡವು ಖಚಿತ ಮಾಹಿತಿ ಮೇರೆಗೆ ಮಂಗಳೂರು ಸೆಂಟ್ರಲ್ ರೈಲ್ವೆ ಸ್ಟೇಷನ್ ನಲ್ಲಿ ವಶಕ್ಕೆ ಪಡೆದು ಬಂಧಿಸಿದೆ.




