Breaking
26 Sep 2026, Sat

ಕಾರು ಮತ್ತು ಸ್ಕೂಟರ್ ಡಿಕ್ಕಿ : ವಿದ್ಯಾರ್ಥಿನಿ ಸಾವು, ಓರ್ವ ಗಂಭೀರ

ಬಂಟ್ವಾಳ: ತಾಲೂಕಿನ ಕಾವಳಕಟ್ಟೆಯಲ್ಲಿ ಕಾರು ಮತ್ತು ಸ್ಕೂಟರ್ ನಡುವೆ ಡಿಕ್ಕಿ ಸಂಭವಿಸಿ ಎಂಜಿನಿಯರಿಂಗ್ ವಿದ್ಯಾರ್ಥಿನಿ ಮೃತಪಟ್ಟಿದ್ದು, ಮತ್ತೊಬ್ಬ ಗಂಭೀರವಾಗಿ ಗಾಯಗೊಂಡ ಘಟನೆ ನ. 19 ರಂದು ಮಧ್ಯಾಹ್ನ ನಡೆದಿದೆ.

ಮೃತಪಟ್ಟ ವಿದ್ಯಾರ್ಥಿಯನ್ನು ಕಡಬದ ಸುನಿಲ್ ಎಂಬವರ ಪುತ್ರಿ ಅನನ್ಯ (21 ವ) ಎಂದು ಗುರುತಿಸಲಾಗಿದೆ. ಗುರುವಾಯನಕೆರೆ ನಿವಾಸಿ ಪೃಥ್ವಿ ಎಂಬ ಹಿಂಬದಿ ಸವಾರನಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

ಇಬ್ಬರೂ ಮಂಗಳೂರಿನ ಕಾಲೇಜಿನಲ್ಲಿ ಅಂತಿಮ ವರ್ಷದ ಎಂಜಿನಿಯರಿಂಗ್ ವಿದ್ಯಾರ್ಥಿಗಳು ಎಂದು ತಿಳಿದುಬಂದಿದೆ.

Leave a Reply

Your email address will not be published. Required fields are marked *