Breaking
10 May 2026, Sun

ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ: ಚಾಲಕ ಅಪಾಯದಿಂದ ಪಾರು

ಮಡಿಕೇರಿ: ದೇವರಕೊಲ್ಲಿ ಫಾಲ್ಸ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಜ್ಯೂಸ್ ಬಾಟಲಿ ಸಾಗಿಸುತ್ತಿದ್ದ ಲಾರಿ ಪಲ್ಟಿಯಾದ ಘಟನೆ ನಡೆದಿದೆ.

ಮಡಿಕೇರಿಯಿಂದ ಸುಳ್ಯ ಕಡೆಗೆ ಬರುತ್ತಿದ್ದ ಲಾರಿ ದೇವರಕೊಳ್ಳಿ ಫಾಲ್ಸ್‌ ಬಳಿ ಬಂದಾಗ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ನಂತರ ವಾಹನಕ್ಕೆ ಬೆಂಕಿ ಹೊತ್ತಿಕೊಂಡಿತು. ಮಾಹಿತಿ ತಿಳಿಯುತ್ತಿದ್ದಂತೆ ಮಡಿಕೇರಿ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯ ನಡೆಸಿದರು.

ಘಟನೆಯಲ್ಲಿ ಲಾರಿ ಚಾಲಕ ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

Leave a Reply

Your email address will not be published. Required fields are marked *