Breaking
26 Sep 2026, Sat

ಸುಖಾನಂದ ಶೆಟ್ಟಿಯ ಕೊಲೆ ಪ್ರಕರಣ: 19 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಮಂಗಳೂರು: ಸುಖಾನಂದ ಶೆಟ್ಟಿಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಮಾರು 19 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯನ್ನು ಬಜ್ಪೆ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಅಬ್ದುಲ್ ಸಲಾಂ ಅಡ್ಡೂರು ಎಂದು ಗುರುತಿಸಲಾಗಿದೆ.

2006 ಡಿಸೆಂಬರ್ 1, ರಂದು, ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಹೊಸಬೆಟ್ಟು ಬಳಿ ಸುಖಾನಂದ ಶೆಟ್ಟಿಯನ್ನು ಕಬೀರ್ ಮತ್ತು ಆತನ ಸಹಚರರು ಕೊಲೆ ಮಾಡಿ ತಲೆಮರೆಸಿಕೊಂಡಿದ್ದರು.

ಅಪರಾಧದ ಮೂರು ತಿಂಗಳ ನಂತರ ದೇಶ ತೊರೆದು ವಿದೇಶದಲ್ಲಿ ವಾಸಿಸುತ್ತಿದ್ದ ಸಲಾಂ ಇತ್ತೀಚೆಗೆ ಕಿನ್ನಿಪದವಿನ ಬಾಡಿಗೆ ಮನೆಯಲ್ಲಿ ತಂಗಿದ್ದಾನೆಂಬ ಮಾಹಿತಿ ತಿಳಿದ ಬಜ್ಪೆ ಪೊಲೀಸರು ನ.18ರಂದು ರಾತ್ರಿ ವಶಕ್ಕೆ ಪಡೆದಿದ್ದಾರೆ.

ಪ್ರಕರಣದಲ್ಲಿ ಈಗಾಗಲೇ 16 ಮಂದಿಯನ್ನು ಬಂಧಿಸಲಾಗಿದ್ದು, 11 ಮಂದಿ ಪರಾರಿಯಾಗಿದ್ದಾರೆ.

Leave a Reply

Your email address will not be published. Required fields are marked *