Breaking
10 May 2026, Sun

ಹೃದಯಾಘಾತದಿಂದ ಮಲ್ಪೆ ನಾರಾಯಣಗುರು ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಸಾವು

ಉಡುಪಿ: ಮಲ್ಪೆ ನಾರಾಯಣಗುರು ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಕರ್ತವ್ಯದಲ್ಲಿರುವಾಗ ಹೃದಯಾಘಾತದಿಂದ ಮೃತಪಟ್ಟ ಘಟನೆ ನ. 19 ರಂದು ನಡೆದಿದೆ.

ಮೃತಪಟ್ಟವರನ್ನು ಅಲೆವೂರು ಗ್ರಾಮ ಪಂಚಾಯತ್‌ನ ಮಾಜಿ ಸದಸ್ಯ ಗಣೇಶ್ ದೇವಾಡಿಗ ಮಾರ್ಪಳ್ಳಿ (51) ಎಂದು ಗುರುತಿಸಲಾಗಿದೆ.

ಗಣೇಶ್ ಅವರು ಎಂದಿನಂತೆ ಶಾಲೆಗೆ ಬಂದಿದ್ದು ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಎದೆ ನೋವು ಕಾಣಿಸಿಕೊಂಡು ಇದ್ದಕ್ಕಿದ್ದಂತೆ ಕುಸಿದು ಬಿದ್ದರು. ಅವರನ್ನು ತಕ್ಷಣವೇ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಮೃತರು ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *