Breaking
24 Jun 2026, Wed

ಜುಗಾರಿ ಆಟದಲ್ಲಿ ನಿರತರಾಗಿದ್ದ ಮೂರು ಮಂದಿ ಪೊಲೀಸ್ ವಶಕ್ಕೆ

ಕಾಸರಗೋಡು: ಜುಗಾರಿ ಆಟದಲ್ಲಿ ನಿರತರಾಗಿದ್ದ ಮೂರು ಮಂದಿಯನ್ನು ಪೊಲೀಸರು ಬಂಧಿಸಿದ ಘಟನೆ ಕಾಸರಗೋಡಿನ ಬದಿಯಡ್ಕದಲ್ಲಿ ನ. 19ರಂದು ನಡೆದಿದೆ.

ಬಂಧಿತ ಆರೋಪಿಗಳನ್ನು ನೀರ್ಚಾಲು ಕಾಕುಂಜೆಯ ನವೀನ್(40), ರವಿರಾಜ್(35), ಎದಿರ್ತೋಡು ನಿವಾಸಿ ಹರೀಶ(36) ಎಂದು ಗುರುತಿಸಲಾಗಿದೆ.

ನೀರ್ಚಾಲು ಪೇಟೆಯಲ್ಲಿ ಜುಗಾರಿ ಆಟದಲ್ಲಿ ನಿರತರಾಗಿದ್ದ ಮೂವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಇಬ್ಬರು ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ.

ಪೊಲೀಸರು ಆರೋಪಿಗಳಿಂದ ಆಟಕ್ಕೆ ಬಳಸಿದ 3100 ರೂ.ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ಬದಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *