Breaking
25 Sep 2026, Fri

ಯಕ್ಷಗಾನ ವೇಷಧಾರಿ ಈಶ್ವರ ಗೌಡ ಹೃದಯಾಘಾತದಿಂದ ನಿಧನ

ಉಡುಪಿ: ಯಕ್ಷಗಾನ ವೇಷಧಾರಿ ಈಶ್ವರ ಗೌಡ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ.

ಶೃಂಗೇರಿ ಸಮೀಪದ ನೆಮ್ಮಾರ್‌ ನಿವಾಸಿಯಾಗಿದ್ದ ಈಶ್ವರ ಗೌಡ ಅವರು ಮಂದಾರ್ತಿ 2ನೇ ಮೇಳದ ಪ್ರತಿಭಾನ್ವಿತ ಕಲಾವಿದ. ದೇವಿ ಮಹಾತ್ಮೆ ಪ್ರಸಂಗದಲ್ಲಿ ಮಹಿಷಾಸುರ ಪಾತ್ರ ಕೊನೆಯಾಗುತ್ತಿದ್ದಂತೆ ವೇಷ ಕಳಚುವ ಮುನ್ನವೇ ಬಣ್ಣದ ಮನೆಯಲ್ಲಿ ಹೃದಯಾಘಾತದಿಂದ ಕುಸಿದು ಬಿದ್ದಿದ್ದಾರೆ. ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಅವರು ಕೊನೆಯುಸಿರೆಳೆದಿದ್ದಾರೆ.

ಇವರ ಅಗಲುವಿಕೆಗೆ ಯಕ್ಷಗಾನ ಕಲಾವಿದರು ಮತ್ತು ಯಕ್ಷಪ್ರೇಮಿಗಳು ಸಂತಾಪ ಸೂಚಿಸಿದ್ದಾರೆ.

Leave a Reply

Your email address will not be published. Required fields are marked *