Breaking
10 May 2026, Sun

ಮಾದಕವಸ್ತು ಎಂಡಿಎಂಎ ಮಾರಾಟಕ್ಕೆ ಯತ್ನ: ಆರೋಪಿ ಪೊಲೀಸ್‌ ವಶಕ್ಕೆ

ಪುತ್ತೂರು: ಮಾದಕವಸ್ತು ಎಂಡಿಎಂಎ ಮಾರಾಟಕ್ಕೆ ಯತ್ನಿಸುತ್ತಿದ್ದಾತನನ್ನು ಪೋಲೀಸರು ವಶಕ್ಕೆ ಪಡೆದುಕೊಂಡ ಘಟನೆ ಪುತ್ತೂರು ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಬಂಧಿತ ಆರೋಪಿಯನ್ನು ಪುತ್ತೂರು ಕಬಕ ನಿವಾಸಿ ಮಹಮ್ಮದ್ ಮುಸ್ತಪಾ (36) ಎಂದು ಗುರುತಿಸಲಾಗಿದೆ.

ಖಚಿತ ಮಾಹಿತಿ ಮೇರೆಗೆ ಪೊಲೀಸರು ಸ್ಧಳಕ್ಕೆ ದಾಳಿ ನಡೆಸಿದಾಗ ಬಾಡಿಗೆ ಕೋಣೆಯಲ್ಲಿ ಆರೋಪಿಯು ಅಕ್ರಮವಾಗಿ 14 ಗ್ರಾಂ ನಿಷೇದಿತ ಮಾದಕ ವಸ್ತು ಎಂಡಿಎಂಎ ವನ್ನು ತನ್ನ ಬಳಿ ಇಟ್ಟುಕೊಂಡು ಮಾರಾಟ ಮಾಡುತ್ತಿರುವುದು ಕಂಡುಬಂದಿದೆ. ಸದ್ಯ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಈ ಬಗ್ಗೆ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *