ವಿಟ್ಲ: ವಿಟ್ಲ ಪೊಲೀಸ್ ಠಾಣಾ ಸರಹದ್ದಿನಲ್ಲಿ ಹಾಗೂ ಪುತ್ತೂರು ಭಾಗದಲ್ಲಿ ಹಲವು ಕಳವು ನಡೆಸಿದ್ದ ಇಬ್ಬರು ಖದೀಮರನ್ನು ವಿಟ್ಲ ಪೊಲೀಸರು ಮಾಣಿ ಜಂಕ್ಷನ್ ನಲ್ಲಿ ಬಂಧಿಸಿದ್ದಾರೆ.
ಬಂಧಿತರನ್ನು ಮಹಮ್ಮದ್ ರಿಯಾಜ್ ಹಸನಬ್ಬ ಯಾನೆ ರಿಯಾಜ್ (38) ಹಾಗೂ ಮೊಹಮ್ಮದ್ ಇಂತಿಯಾಜ್ (38) ಎಂದು ಗುರುತಿಸಲಾಗಿದೆ.ಇವರು ವಿಟ್ಲ ಠಾಣೆಯ ಮಿತ್ತೂರು, ಕೊಡಾಜೆಗಳಲ್ಲಿ ಮನೆ ಕಳವು , ಪುತ್ತೂರು ನಗರ ಠಾಣಾ ವ್ಯಾಪ್ತಿಯ ಶಾಲೆ ಹಾಗೂ ಅಂಗನವಾಡಿಗಳಲ್ಲಿ ಕಳವು ನಡೆಸಿರುವ ಬಗ್ಗೆ ವಿಚಾರಣೆ ವೇಳೆ ಬಾಯ್ಬಿಟ್ಟಿದ್ದಾರೆ.ಮಹಮ್ಮದ್ ರಿಯಾಜ್ ಹಸನಬ್ಬಎಂಬಾತನ ವಿರುದ್ದ ಕೇರಳ ರಾಜ್ಯದ ಕುಂಬಳೆ ಹಾಗೂ ಮಂಗಳೂರು ನಗರ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಕಳ್ಳತನ ಪ್ರಕರಣ ದಾಖಲಾಗಿದೆ.ಪ್ರಕರಣಕ್ಕೆ ಸಂಬಂಧಿಸಿ ತನಿಖೆ ನಡೆಸಿದ ಪೊಲೀಸರು 1,35,000/–ರೂ. ಮೌಲ್ಯದ ಗ್ಯಾಸ್ ಸಿಲಿಂಡರ್ ಹಾಗೂ ಮನೆ ಸಾಮಗ್ರಿಗಳು , ಹಾಗೂ ಕಳ್ಳತನಕ್ಕೆ ಉಪಯೋಗಿಸಿದ ಸುಮಾರು 1,50,000/- ರೂ ಮೌಲ್ಯದ ಆಟೋರಿಕ್ಷಾ ವಶಪಡಿಸಿಕೊಂಡಿದ್ದು, ಸ್ವಾಧೀನಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ- 2,85,000/- ರೂ. ಅಂದಾಜಿಸಲಾಗಿದೆ.
ದ.ಕ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಯತೀಶ್ ಎನ್.ಐ.ಪಿ.ಎಸ್ ಮತ್ತು ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ರಾಜೇಂದ್ರ ಡಿ.ಎಸ್ ಅವರ ಮಾರ್ಗದರ್ಶನದಂತೆ, ಬಂಟ್ವಾಳ ಉಪವಿಭಾಗದ ಪೊಲೀಸ್ ಉಪಾಧೀಕ್ಷಕರಾದ ಎಸ್. ವಿಜಯ ಪ್ರಸಾದ್ ರವರ ನಿರ್ದೇಶನದಂತೆ, ವಿಟ್ಲ ಪೊಲೀಸ್ ಠಾಣಾ ಪೊಲೀಸ್ ನಿರೀಕ್ಷಕರಾದ ನಾಗರಾಜ್ ಹೆಚ್. ಈ ಅವರ ನೇತೃತ್ವದಲ್ಲಿ ಪೊಲೀಸ್ ಉಪ ನಿರೀಕ್ಷಕರಾದ ವಿದ್ಯಾ ಕೆ.ಜೆ. ರತ್ನಕುಮಾರ್, ಕೌಶಿಕ್ ಸಿಬ್ಬಂಧಿಗಳಾದ ಉದಯ ರೈ, ರಾಧಾಕೃಷ್ಣ , ರಕ್ಷಿತ್ ರೈ, ಶ್ರೀಧರ ಸಿ. ಎಸ್, ಕೃಷ್ಣ ನಾಯ್ಕ್, ಗದಿಗೆಪ್ಪ ಕಲ್ಲೂರ, ಶಂಕರ ಶಂಶಿ, ಮನೋಜ್, ಸತೀಶ್, ಗಣಕಯಂತ್ರ ವಿಭಾಗದ ಸಂಪತ್, ದಿವಾಕರ್ ಆರೋಪಿಗಳ ಪತ್ತೆ ಕಾರ್ಯಾಚರಣೆಯಲ್ಲಿ ಭಾಗವಹಿಸಿರುತ್ತಾರೆ.