Breaking
24 Jun 2026, Wed

ಅಕ್ರಮ ಕೋಳಿ ಅಂಕದ ಮೇಲೆ ಪೊಲೀಸರಿಂದ ದಾಳಿ : ಹಲವರ ಬಂಧನ

ಮೂಡುಬಿದಿರೆ : ಅಕ್ರಮವಾಗಿ ನಡೆಯುತ್ತಿದ್ದ ಕೋಳಿ ಅಂಕದ ಮೇಲೆ ಪೊಲೀಸರು ದಾಳಿ ನಡೆಸಿದ ಘಟನೆ ವಾಲ್ಪಾಡಿ ಗ್ರಾಮದ ಉಡೆಜಾಲು ಎಂಬಲ್ಲಿ ನ.19 ರಂದು ನಡೆದಿದೆ.

ಖಚಿತ ಮಾಹಿತಿಯ ಮೇರೆಗೆ ಪೊಲೀಸರು ಸ್ಥಳಕ್ಕೆ ದಾಳಿ ನಡೆಸಿದಾಗ ವಾಲ್ಪಾಡಿ ಗ್ರಾಮದ ಉಡೆಜಾಲು ಎಂಬಲ್ಲಿನ ಮುತ್ತಯ್ಯ ಎಂಬುವವರ ಮನೆಯ ಮುಂಭಾಗದ ಗುಡ್ಡದಲ್ಲಿ ಕೆಲವು ವ್ಯಕ್ತಿಗಳು ಸೇರಿ, ಎರಡು ಅಂಕದ ಕೋಳಿಗಳಿಗೆ ಮಾರಕವಾದ ಬಾಳುಗಳನ್ನು ಕಟ್ಟಿ, ಹಿಂಸಾತ್ಮಕವಾಗಿ ಕಾದಾಡಲು ತಯಾರಾಗಿದ್ದರು ಮತ್ತು ಹಣವನ್ನು ಪಣವಾಗಿಟ್ಟು ಕೋಳಿ ಅಂಕ ನಡೆಸುತ್ತಿದ್ದರು ಎಂದು ತಿಳಿದುಬಂದಿದೆ.

ಸದ್ಯ ಪೊಲೀಸರು 10 ಜನರನ್ನು ದಸ್ತಗಿರಿ ಮಾಡಿ, 4,500 ನಗದು ಹಣ ಮತ್ತು ಕಾದಾಟಕ್ಕೆ ಬಳಸುತ್ತಿದ್ದ 6 ಹುಂಜಗಳನ್ನು ವಶಪಡಿಸಿಕೊಂಡಿದ್ದಾರೆ.

ದಸ್ತಗಿರಿಯಾದ ಆರೋಪಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕೋಳಿ ಅಂಕದ ದಾಳಿ ಕಾರ್ಯಾಚರಣೆಯಲ್ಲಿ ಮೂಡುಬಿದಿರೆ ಠಾಣಾ ಪೊಲೀಸ್ ನಿರೀಕ್ಷಕರಾದ ಶ್ರೀ ಸಂದೇಶ್ ಪಿ.ಜಿ. ಮತ್ತು ಸಿಬ್ಬಂದಿಗಳಾದ ರಾಜೇಶ್, ಮೊಹಮ್ಮದ್ ಇಕ್ಬಾಲ್, ಮೊಹಮ್ಮದ್ ಹುಸೇನ್, ಅಖಿಲ್ ಅಹಮದ್, ರಮೇಶ್, ವೆಂಕಟೇಶ್, ಚಂದ್ರಶೇಖರ ಮತ್ತು ಉಮೇಶ್ ಅವರು ಭಾಗವಹಿಸಿದ್ದರು.

Leave a Reply

Your email address will not be published. Required fields are marked *