Breaking
23 Mar 2026, Mon

ವೀರಕಂಭ ಗ್ರಾಮ ಪಂಚಾಯತ್‌ನಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ವಿಶೇಷ ಗ್ರಾಮ ಸಭೆ

ಕಲ್ಲಡ್ಕ : ಬಂಟ್ವಾಳ ತಾಲೂಕು ವೀರಕಂಭ ಗ್ರಾಮ ಪಂಚಾಯತ್ ನಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ “ಗ್ರಾಮಭಿವೃದ್ಧಿಯ ಹೊಸ ಹಾದಿ-ಯುಕ್ತಧಾರ ” ಮಾರ್ಗ ಸೂಚಿಗಳನ್ನು ಅನುಸರಿಸಿ 2026-27 ನೇ ಸಾಲಿನ ಕಾರ್ಮಿಕ ಅಯಾವ್ಯಯ ತಯಾರಿಸುವ ವಿಶೇಷ ಗ್ರಾಮ ಸಭೆಯು ನ. 20 ರಂದು ವೀರಕಂಭ ಗ್ರಾಮ ಪಂಚಾಯತ್ ನ ಸಭಾಂಗಣದಲ್ಲಿ ಜರುಗಿತು.

ಸಭೆಯಲ್ಲಿ ವೀರಕಂಭ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಲಲಿತ ರವರು ಅಧ್ಯಕ್ಷತೆ ವಹಿಸಿದ್ದರು.

ಈ ವೇಳೆ ಮಾತನಾಡಿದ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶಂಭು ಕುಮಾರ ಶರ್ಮಾ ಅವರು ಮಹಾತ್ಮ ಗಾಂಧಿ ನರೇಗಾ ಯೋಜನೆಯ ಮಾರ್ಗಸೂಚಿ, ಕೈಗೊಳ್ಳಬಹುದಾದ ವೈಯುಕ್ತಿಕ ಹಾಗೂ ಸಾರ್ವಜನಿಕ ಕಾಮಗಾರಿಗಳ ಬಗ್ಗೆ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಅರ್ಜಿಗಳು- ಬೇಡಿಕೆಗಳನ್ನು ಆಧರಿಸಿ 2026-27 ರ ಕ್ರಿಯಾಯೋಜನೆ ತಯಾರಿಸಿ ಸಭೆಯಲ್ಲಿ ಮಂಡಿಸಿ, ಅನುಮೋದಿಸಲಾಯಿತು.

ಈ ಸಂದರ್ಭದಲ್ಲಿ ವೀರಕಂಭ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಜನಾರ್ಧನ ಪೂಜಾರಿ, ಪಂಚಾಯತ್ ಸದಸ್ಯರುಗಳಾದ ದಿನೇಶ್ ಪೂಜಾರಿ, ಜಯಪ್ರಸಾದ್, ಅಬ್ದುಲ್ ರೆಹಿಮಾನ್, ಸಿಬ್ಬಂದಿಗಳಾದ ಚಂದ್ರಹಾಸ್, ಮಿಥುನ್, ವಿನುತ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *