Breaking
23 Mar 2026, Mon

ನ.26: ರಾಯಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಷಷ್ಠಿ ಮಹೋತ್ಸವ

ಬಂಟ್ವಾಳ : ತಾಲೂಕಿನ ರಾಯಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನ.26ರಂದು ವಾಷಿ೯ಕ ಷಷ್ಠಿ ಮಹೋತ್ಸವ ನಡೆಯಲಿದೆ.

ನ.25ರಂದು ಬೆಳಿಗ್ಗೆ 8 ಗಂಟೆಗೆ ಪಂಚಮಿ ಉತ್ಸವ ಪ್ರಯುಕ್ತ ಪಂಚಾಮೃತ ಅಭಿಷೇಕ, ಪವಮಾನ ಅಭಿಷೇಕ, ಸೀಯಾಳಾಭಿಷೇಕ, ಶತ ರುದ್ರಾಭಿಷೇಕ, ಮಧ್ಯಾಹ್ನ 12 ಗಂಟೆಗೆ ಮಹಾಪೂಜೆ, ಸಾರ್ವಜನಿಕ ಅನ್ನಸಂತರ್ಪಣೆ, ಸಂಜೆ 6 ಗಂಟೆಗೆ ನಾಗಸನ್ನಿಧಿಯಲ್ಲಿ ಸಾಮೂಹಿಕ ಆಶ್ಲೇಷ ಬಲಿ, ರಾತ್ರಿ 7 ಗಂಟೆಗೆ ಭಜನೆ, 8 ಗಂಟೆಗೆ ರಂಗ ಪೂಜೆ ಮತ್ತು ಪಂಚಮಿ ಉತ್ಸವ ನಡೆಯಲಿದೆ.

ನ.26 ರಂದು ಬೆಳಿಗ್ಗೆ 8 ಗಂಟೆಗೆ ಪಂಚಾಮೃತ ಮತ್ತು ಪವಮಾನ ಅಭಿಷೇಕ, 9 ಗಂಟೆಗೆ ತುಲಾಭಾರ ಸೇವೆ, 11 ಗಂಟೆಗೆ ಮಹಾಪೂಜೆ, 11.30ರಿಂದ ಷಷ್ಠಿ ಮಹೋತ್ಸವ, ಮಧ್ಯಾಹ್ನ 1 ಗಂಟೆಗೆ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ ಎಂದು ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರಾಘವೇಂದ್ರ ಪೂಜಾರಿ ರಾಯಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *