Breaking
23 Mar 2026, Mon

ಕಾರ್ಕಳ : ನಿಯಂತ್ರಣ ತಪ್ಪಿದ ಬಸ್ ರಸ್ತೆ ಬದಿ ನಿಂತಿದ್ದ ರಿಕ್ಷಾಗೆ ಡಿಕ್ಕಿ

ಕಾರ್ಕಳ: ಉಚ್ಛಂಗಿ ಮಾರಿಯಮ್ಮ ದೇವಸ್ಥಾನದ ಬಳಿ ಬಸ್ ಚಾಲಕನಿಗೆ ಆಕಸ್ಮಿಕವಾಗಿ ಲೋ ಬಿಪಿ ಉಂಟಾದ ಕಾರಣ ಬಸ್ ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಆಟೋ ರಿಕ್ಷಾಕ್ಕೆ ಡಿಕ್ಕಿ ಹೊಡೆದ ಘಟನೆ ನ. 20 ರಂದು ನಡೆದಿದೆ.

ರಿಕ್ಷಾ ಚಾಲಕ ತಮ್ಮ ವಾಹನವನ್ನು ರಸ್ತೆ ಬದಿಯಲ್ಲಿ ನಿಲ್ಲಿಸಿ ಒಳಗಡೆ ಕುಳಿತಿದ್ದಾಗ, ಬಸ್ ದಿಢೀರನೆ ಬಂದು ರಿಕ್ಷಾಕ್ಕೆ ಡಿಕ್ಕಿ ಹೊಡೆದಿದೆ.

ಈ ಅಪಘಾತದಲ್ಲಿ ರಿಕ್ಷಾ ಚಾಲಕರಿಗೆ ತಲೆ, ಕೈ ಮತ್ತು ಕಾಲುಗಳಿಗೆ ಗಾಯಗಳಾಗಿವೆ. ಜೊತೆಗೆ, ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವಿದ್ಯಾರ್ಥಿನಿಯೊಬ್ಬಳಿಗೂ ಸಣ್ಣಪುಟ್ಟ ಗಾಯಗಳಾಗಿವೆ ಎಂದು ತಿಳಿದುಬಂದಿದೆ.

Leave a Reply

Your email address will not be published. Required fields are marked *