Breaking
23 Mar 2026, Mon

ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಸಾರ್ವಜನಿಕರೊಂದಿಗೆ ಸಂವಾದ ನಡೆಸಿದ ಸಂಸದ ಕ್ಯಾಪ್ಟನ್ ಚೌಟ

ಸುಳ್ಯ: ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್‌ ಚೌಟರವರು ಸಂಸದರ ನಡೆ ಗ್ರಾಮದ ಕಡೆʼ ಕಾರ್ಯಕ್ರಮದಡಿ ನ.20ರಂದು ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಹಲವೆಡೆ ಸಾರ್ವಜನಿಕರೊಂದಿಗೆ ಸಂವಾದ ನಡೆಸಿದರು.

ಬೆಳಿಗ್ಗೆ ತಾಲೂಕಿನ ಬಾಳುಗೋಡು, ಮಧ್ಯಾಹ್ನ ಕಲ್ಮಕಾರು ಹಾಗೂ ಕೊಲ್ಲಮೊಗ್ರುವಿನಲ್ಲಿ ಕ್ಯಾಪ್ಟನ್ ಚೌಟರವರು ಸಾರ್ವಜನಿಕರೊಂದಿಗೆ ಸಂವಾದ ನಡೆಸಿ ಆ ಬಳಿಕ ಸ್ಥಳೀಯರ ಕುಂದು-ಕೊರತೆ ಆಲಿಸಿ ಸೂಕ್ತ ರೀತಿಯಲ್ಲಿ ಸ್ಪಂದಿಸುವ ಭರವಸೆ ನೀಡಿದರು.

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಪ್ರತಿಯೊಂದು ಭಾಗದ ಜನರನ್ನು ತಲುಪಿ , ಆ ಮೂಲಕ ಅಲ್ಲಿನ ಸಮಸ್ಯೆಗಳ ಬಗ್ಗೆ ತಿಳಿದುಕೊಂಡು ಸೂಕ್ತ ರೀತಿಯಲ್ಲಿ ಸ್ಪಂದಿಸಬೇಕೆಂಬ ಆಶಯ ನನ್ನದು. ಜನರ ಸಮಸ್ಯೆಗಳು-ಸವಾಲುಗಳಿಗೆ ಖುದ್ದು ಆಲಿಸಿ ಅದಕ್ಕೆ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ನಡೆಸಲಾಗುವುದು ಎಂದು ಅವರು ಹೇಳಿದರು.

ಈ ಸಂದರ್ಭ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ, ಬಿಜೆಪಿ ಸುಳ್ಯ‌ ಮಂಡಲ ಅಧ್ಯಕ್ಷ ವೆಂಕಟ್ ವಳಲಂಬೆ, ಬಿಜೆಪಿ ಮುಖಂಡರಾದ ವೆಂಕಟ್ ದಂಬೇಕೋಡಿ, ಕಿಶೋರ್ ಶಿರಾಡಿ, ವಿನಯ್ ಮುಳುಗಾಡು, ವಿನಯ್ ಕಂದಡ್ಕ, ಪ್ರದೀಪ್ ರೈ ಮನವಳಿಕೆ, ಕೇಶವ ಭಟ್ ಮುಳಿಯ, ಶ್ರೀಕಾಂತ್ ಮಾವಿನಕಟ್ಟೆ, ಸೋಮಶೇಖರ್ ಕಟ್ಟೆಮನೆ, ಚಂದ್ರಹಾಸ ಶಿವಾಲ, ಎಟಿ ಕುಸುಮಾಧರ್, ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಕಾರ್ಯಕರ್ತರು ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *