ಮೂಡಬಿದಿರೆ: ಪಶ್ಚಿಮ ಘಟ್ಟ ಪ್ರದೇಶಗಳ ಕಾಡು ಮಾವಿನ ಪ್ರಭೇದಗಳ ಆನುವಂಶಿಕ ವ್ಯತ್ಯಾಸದ ಮೌಲ್ಯಮಾಪನ’ ಎಂಬ ಮಹಾಪ್ರಬಂಧಕ್ಕೆ ಆಳ್ವಾಸ್ ಪದವಿಪೂರ್ವ ಕಾಲೇಜಿನ ಉಪನ್ಯಾಸಕಿ ರುಚಿಕಾ ರೋಶನ್ ಅವರಿಗೆ ಮಂಗಳೂರು ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಪದವಿ ಲಭಿಸಿದೆ.
ಈ ಮಹಾಪ್ರಬಂಧವನ್ನು ಆಳ್ವಾಸ್ ಸ್ನಾತಕೋತ್ತರ ಜೈವಿಕ ತಂತ್ರಜ್ಞಾನ ವಿಭಾಗದ ಮುಖ್ಯಸ್ಥ ಡಾ.ರಾಮ್ ಭಟ್ ಅವರ ಮಾರ್ಗದರ್ಶನದಲ್ಲಿ ಮಂಡಿಸಲಾಯಿತು.

ರುಚಿಕಾ ರೋಶನ್ ಅವರು ಬಂಟ್ವಾಳ ತಾಲೂಕಿನ ವಾಮದಪದವು ಪಿಲಿಮೊಗರು ಗ್ರಾಮದ ಜಿನ್ನಪ್ಪ ಪೂಜಾರಿ-ಲೀಲಾವತಿ ದಂಪತಿಯ ಪುತ್ರಿಯಾಗಿದ್ದು ಕಾರ್ಕಳ ಪತ್ತೊಂಜಿಕಟ್ಟೆಯ ವಿಠಲ್ ಎಂ. ಸಾಲ್ಯಾನ್- ವಸಂತಿ ವಿ. ಅವರ ಸೊಸೆ ಹಾಗೂ ರೋಶನ್ ಸಾಲ್ಯಾನ್ ಅವರ ಪತ್ನಿ.





