ಉಡುಪಿ : ಪಾಕಿಸ್ತಾನದ ಪರವಾಗಿ ಬೇಹುಗಾರಿಕೆ ನಡೆಸಿದ ಆರೋಪದ ಹಿನ್ನೆಲೆಯಲ್ಲಿ ಕೊಚ್ಚಿನ್ ಶಿಪ್ ಯಾರ್ಡ್‌ನ ಮಲ್ಪೆ ಘಟಕದಲ್ಲಿ ಕೆಲಸ ಮಾಡುತ್ತಿರುವ ಇಬ್ಬರು ನೌಕರನ್ನು ಉಡುಪಿ ಜಿಲ್ಲಾ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ಉತ್ತರ ಪ್ರದೇಶದವರಾದ ರೋಹಿತ್ (26) ಮತ್ತು ಸಂತ್ರಿ (37) ಎಂದು ಗುರುತಿಸಲಾಗಿದೆ.
ಆರೋಪಿಗಳನ್ನು ಸುಷ್ಮಾ ಮೆರೈನ್ ಪ್ರೈವೇಟ್ ಲಿಮಿಟೆಡ್ ಮೂಲಕ ಗುತ್ತಿಗೆ ಆಧಾರದ ಮೇಲೆ ನೇಮಿಸಿಕೊಳ್ಳಲಾಗಿದ್ದು ಇಬ್ಬರು ಕಳೆದ ಒಂದೂವರೆ ವರ್ಷಗಳಿಂದ ಹಡಗು ನಿರ್ಮಾಣ ಮತ್ತು ನೌಕಾ ಉಪಕರಣಗಳಿಗೆ ಸಂಬಂಧಿಸಿದ ಗೌಪ್ಯ ಮಾಹಿತಿಯನ್ನು ಪಾಕಿಸ್ತಾನಕ್ಕೆ ಹಂಚಿಕೊಂಡಿದ್ದಾರೆ ಎಂಬ ಆರೋಪ ವ್ಯಕ್ತವಾಗಿದೆ.

ಈ ಹಿಂದೆ ಕೇರಳದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ರೋಹಿತ್, ಹಣಕ್ಕಾಗಿ ವಾಟ್ಸಾಪ್ ಮೂಲಕ ವರ್ಗೀಕೃತ ಹಡಗು ಪಟ್ಟಿಗಳು ಮತ್ತು ಸೂಕ್ಷ್ಮ ಮಾಹಿತಿಯನ್ನು ಕಳಿಸುತ್ತಿದ್ದಾನೆ ಎಂದು ಆರೋಪಿಸಲಾಗಿದೆ.

ಕೊಚ್ಚಿನ್ ಶಿಪ್‌ಯಾರ್ಡ್‌ನ ಸಿಇಒ ಸಲ್ಲಿಸಿದ ಅಧಿಕೃತ ದೂರಿನ ಹಿನ್ನೆಲೆಯಲ್ಲಿ ಈ ಕಾರ್ಯಾಚರಣೆ ನಡೆದಿದ್ದು, ಉಡುಪಿ ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.



