Breaking
23 Mar 2026, Mon

ದ್ವಿಚಕ್ರ ವಾಹನ ಕಳವು ಪ್ರಕರಣ: ಇಬ್ಬರು ಆರೋಪಿಗಳ ಬಂಧನ

ಬೆಳ್ತಂಗಡಿ: ವೇಣೂರು ಪೊಲೀಸ್ ಠಾಣೆಯ ವ್ಯಾಪ್ತಿಯ ಪಾನೂರು ಶ್ರೀ ಗುರು ನಾರಾಯಣ ವೃತ್ತದ ಬಳಿ ನಿಲ್ಲಿಸಿದ್ದ ದ್ವಿಚಕ್ರ ವಾಹನ ಕಳ್ಳತನ ಮಾಡಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ವೇಣೂರಿನ ಮುಹಮ್ಮದ್ ಇರ್ಷಾದ್ (25) ಮತ್ತು ಪಡಂಗಡಿಯ ಸಾಧಿಕ್ ಖಾನ್ (26) ಎಂದು ಗುರುತಿಸಲಾಗಿದೆ. ಕಳುವಾದ ಬೈಕ್ ಬೆಳ್ತಂಗಡಿ ತಾಲೂಕಿನ ಕುಕ್ಕೇಡಿ ನಿವಾಸಿ ಸಂಪತ್ ಕುಮಾರ್ ಅವರಿಗೆ ಸೇರಿರುವುದು ತಿಳಿದುಬಂದಿದೆ.

ಪೊಲೀಸರು ಆರೋಪಿಗಳಿಂದ ದ್ವಿ ಚಕ್ರ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು, ನ್ಯಾಯಾಲಯವು ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತು.

ಘಟನೆಯ ಕುರಿತು ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *