Breaking
23 Mar 2026, Mon

ಜ.04: ಮಂಗಳೂರು ಕುದ್ಮುಲ್ ರಂಗರಾವ್ ಪುರಭವನದಲ್ಲಿ “ಕುಂಭಕಲಾವಳಿ ಕುಲಾಲ ಕಲಾ ಸೇವಾಂಜಲಿ” ಕಾಯ೯ಕ್ರಮ

ಮಂಗಳೂರು : ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕರ್ನಾಟಕ ರಾಜ್ಯ ಕುಲಾಲ ಕುಂಬಾರರ ಯುವ ವೇದಿಕೆ ಮತ್ತು ಮಹಿಳಾ ಸಂಘಟನೆಗಳ ಒಕ್ಕೂಟ (ರಿ) ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಹಾಗೂ ದಾಸ್ ಚಾರಿಟೇಬಲ್ ಸೇವಾ ಟ್ರಸ್ಟ್ (ರಿ) ಮಂಗಳೂರು ಇದರ ಸಹಯೋಗದಲ್ಲಿ “ಕುಂಭಕಲಾವಳಿ ಕುಲಾಲ ಕಲಾ ಸೇವಾಂಜಲಿ” ಕಾಯ೯ಕ್ರಮ ಮಂಗಳೂರಿನ ಕುದ್ಮುಲ್ ರಂಗರಾವ್, ಪುರಭವನದಲ್ಲಿ ಜ. 04ರಂದು ನಡೆಯಲಿದೆ.

ಬೆಳಿಗ್ಗೆ 09 ಗಂಟೆಗೆ ಪದಗ್ರಹಣ ನಡೆಯಲಿದ್ದು, ಬಳಿಕ ಮಧ್ಯಾಹ್ನ 12.00 ಗಂಟೆಗೆ ಸಭಾ ಕಾರ್ಯಕ್ರಮ ನಡೆಯಲಿದೆ. ನಡುಬೊಟ್ಟು ಶ್ರೀ ಉದ್ಭವ ರೌದ್ರನಾಥೇಶ್ವರ ದೇವಸ್ಥಾನದ ಧಮ೯ದಶಿ೯ ಡಾ. ರವಿ.ಎನ್ ದೀಪ ಪ್ರಜ್ವಲಿಸಿ ಈ ಕಾರ್ಯಕ್ರಮ ಉದ್ಘಾಟಿಸಲಿದ್ದು ಮುಳಿಯ ಶ್ರೀ ವೈಷ್ಣವಿ ಕ್ಷೇತ್ರದ ಶ್ರೀ ಶ್ರೀ ಶಿವಾನಂದ ಸರಸ್ವತೀ ಸ್ವಾಮೀಜಿ ದಿವ್ಯ ಉಪಸ್ಥಿತಿವಹಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಮೈಸೂರು ಸಂಸ್ಥಾನದ ಮಹಾರಾಜರಾದ ಶ್ರೀ ಯಧುವೀರ್ ಒಡೆಯರ್, ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಭಾಗವಹಿಸಲಿದ್ದಾರೆ.

ಅತಿಥಿಗಳಾಗಿ ಅಖಿಲ ಭಾರತ ಕುಂಬಾರರ ಮಹಾಸಭಾ (ರಿ) ಬೆಂಗಳೂರು , ರಾಷ್ಟ್ರೀಯ ಅಧ್ಯಕ್ಷರಾದ ಶಿವಕುಮಾರ್ ಚೌಡ ಶೆಟ್ಟಿ, ಬೆಂಗಳೂರು, ರಾಜೀವಗಾಂಧಿ ವಿ.ವಿಯ ಸೆನೆಟ್ ಸದಸ್ಯರಾದ ಡಾ| ಶ್ರೀನಿವಾಸ ವೇಲು, ಕರ್ನಾಟಕ ರಾಜ್ಯ ಕುಲಾಲ ಕುಂಬಾರರ ಯುವ ವೇದಿಕೆ ಮತ್ತು ಮಹಿಳಾ ಸಂಘಟನೆಗಳ ಒಕ್ಕೂಟ (ರಿ) ದ ಸ್ಥಾಪಕಾಧ್ಯಕ್ಷರಾದ ಡಾ| ಎಂ. ಅಣ್ಣಯ್ಯ ಕುಲಾಲ್ ಸೇರಿದಂತೆ ಇನ್ನೂ ಅನೇಕರು ಉಪಸ್ಥಿತಿ ಇರಲಿದ್ದಾರೆ.

ಸಂಜೆ 5.30ಕ್ಕೆ ಕರ್ನಾಟಕ ರಾಜ್ಯ ಕುಲಾಲ ಕುಂಬಾರರ ಯುವ ವೇದಿಕೆ ಮತ್ತು ಮಹಿಳಾ ಸಂಘಟನೆಗಳ ಒಕ್ಕೂಟ (ರಿ)ದ ಜಿಲ್ಲಾಧ್ಯಕ್ಷರಾದ ಲ| ಅನಿಲ್ ದಾಸ್ ಅಧ್ಯಕ್ಷತೆಯಲ್ಲಿ ಸಮಾರೋಪ ಕಾರ್ಯಕ್ರಮ ನಡೆಯಲಿದ್ದು, ಶ್ರೀ ಧಾಮ ಮಾಣಿಲ, ಶ್ರೀ ಮಹಾಲಕ್ಷ್ಮೀ ಕ್ಷೇತ್ರದ ಶ್ರೀಶ್ರೀಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ.

ಅತಿಥಿಗಳಾಗಿ ಕರ್ನಾಟಕ ವಿಧಾನಸಭಾ ಸಭಾಪತಿ ಯು.ಟಿ. ಖಾದರ್, ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ್ ಕಾಮತ್, ಮಂಗಳೂರು ಉತ್ತರ ಕ್ಷೇತ್ರದ, ಶಾಸಕ ವೈ. ಭರತ್ ಶೆಟ್ಟಿ, ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ಬಂಟ್ವಾಳ ಶಾಸಕ ಯು. ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು, ಪುತ್ತೂರು ಶಾಸಕ ಅಶೋಕ್‌ ಕುಮಾರ್‌ ರೈ ಸೇರಿದಂತೆ ಇನ್ನೂ ಅನೇಕರು ಉಪಸ್ಥಿತಿ ಇರಲಿದ್ದಾರೆ.

ಈ ಸಂದರ್ಭದಲ್ಲಿ ದಾಸ್ ಚಾರಿಟೇಬಲ್ ಸೇವಾ ಟ್ರಸ್ಟ್ (ರಿ) ಮಂಗಳೂರು ಸಹಯೋಗದೊಂದಿಗೆ ಸೇವಾಂಜಲಿ ,ವಿವಿಧ ವಿಧಾನಸಭಾ ಫಲಾನುಭವಿಗಳಿಗೆ ಸಹಾಯಹಸ್ತ, ಸಾಧಕರಿಗೆ ಸನ್ಮಾನ, ಶೈಕ್ಷಣಿಕ ಪ್ರೋತ್ಸಾಹ ಧನ , ವೈದ್ಯಕೀಯ ನೆರವು, ಅಶಕ್ತರಿಗೆ ಆರ್ಥಿಕ ನೆರವು ಹಸ್ತಾಂತರ ಕಾರ್ಯಕ್ರಮ ನಡೆಯಲಿದೆ.

ಅವಿಭಜಿತ ಜಿಲ್ಲೆಯ ಕುಲಾಲ ಸಂಘಗಳ/ ಯುವವೇದಿಕೆಗಳ ಸಾಂಸ್ಕತಿಕ ಸ್ಪರ್ಧಾ ಕಾರ್ಯಕ್ರಮ ನಡೆಯಲಿದ್ದು, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷರಾದ ಡಾ| ಎಂ. ಮೋಹನ ಆಳ್ವ ಚಾಲನೆ ನೀಡಲಿದ್ದಾರೆ. ವಿಜೇತ ತಂಡಗಳಿಗೆ ನಗದು ಬಹುಮಾನ ಸಿಗಲಿದೆ.

Leave a Reply

Your email address will not be published. Required fields are marked *