Breaking
9 Aug 2026, Sun

ಮಣಿಪಾಲದ ವಿದ್ಯಾರತ್ನ ಅಪಾರ್ಟ್ಮೆಂಟ್ ಗೆ ಪೊಲೀಸ್ ದಾಳಿ: ಗಾಂಜಾ ಸಂಗ್ರಹಿಸಿದ್ದ ಇಬ್ಬರು ವಿದ್ಯಾರ್ಥಿಗಳ ಬಂಧನ

ಉಡುಪಿ: ಮಣಿಪಾಲ ವಿದ್ಯಾರತ್ನ ನಗರದ ಎರಡು ಅಪಾರ್ಟ್ಮೆಂಟ್ ಗೆ ಪೊಲೀಸರು ದಾಳಿ ನಡೆಸಿ ಇಬ್ಬರು ವಿದ್ಯಾರ್ಥಿಗಳನ್ನು ಬಂಧಿಸಿದ್ದಾರೆ.

ಬಂಧಿತ ವಿದ್ಯಾರ್ಥಿಗಳನ್ನು ಗುಜರಾತ್ ಮೂಲದ ಕುಶ್‌ಕೆಯುಶ್ ಪಟೇಲ್ (20) ಮತ್ತು ಉತ್ತರ ಪ್ರದೇಶದ ದೇವಾಂಶ್ ತ್ಯಾಗಿ (22) ಎಂದು ಗುರುತಿಸಲಾಗಿದೆ.

ಆರೋಪಿಗಳು ಗಾಂಜಾವನ್ನು ಮಣಿಪಾಲದಲ್ಲಿ ವಿದ್ಯಾರ್ಥಿಗಳಿಗೆ ಮಾರಾಟ ಮಾಡುವ ಉದ್ದೇಶದಿಂದ ಸಂಗ್ರಹಿಸಿಟ್ಟಿದ್ದರು ಎನ್ನಲಾಗಿದೆ. ಬಂಧಿತರಿಂದ ಸುಮಾರು 36,000 ರೂ. ಮೌಲ್ಯದ 727 ಗ್ರಾಂ ಗಾಂಜಾ ಮತ್ತು 30,000 ರೂ. ಮೌಲ್ಯದ ಒಂದು ಮೊಬೈಲ್ ಫೋನ್ ವಶಪಡಿಸಿಕೊಳ್ಳಲಾಗಿದೆ.

ಈ ಕುರಿತು ಮಣಿಪಾಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *