ಕಾಸರಗೋಡು : ನಗರದ ಹೊರವಲಯದಲ್ಲಿ ನಡೆದ ರಸಮಂಜರಿ ಕಾರ್ಯಕ್ರಮದ ವೇಳೆ ನೂಕುನುಗ್ಗಲು ಸಂಭವಿಸಿ, ಕಾಲ್ತುಳಿತದಿಂದ 15 ಮಂದಿ ಗಾಯಗೊಂಡಿರುವ ಘಟನೆ ನ. 23 ರಂದು ನಡೆದಿದೆ.

“ಫ್ಲೀ ಯುವಜನ ಸಂಘಟನೆ” ವತಿಯಿಂದ ನುಳ್ಳಿಪ್ಪಾಡಿ ಪ್ರದೇಶದಲ್ಲಿ ಆಯೋಜಿಸಿದ್ದ ಹೆಸರಾಂತಗಾಯಕ ಹನಾನ್ ಷಾ ಅವರ ಕಾರ್ಯಕ್ರಮಕ್ಕೆ ಸಾವಿರಾರು ಮಂದಿ ಸೇರಿದ್ದರು. ಕಾರ್ಯಕ್ರಮಕ್ಕೆ ಟಿಕೆಟ್ ವ್ಯವಸ್ಥೆ ಮಾಡಲಾಗಿತ್ತು. ಟಿಕೆಟ್ ಪಡೆದವರ ಜೊತೆ ಟಿಕೆಟ್ ಇಲ್ಲದವರೂ ಪ್ರಮುಖ ಗಾಯಕರನ್ನು ನೋಡುವ ಉತ್ಸಾಹದಿಂದ ಮೈದಾನಕ್ಕೆ ಒಳನುಗ್ಗಲು ಯತ್ನಿಸಿದಾಗ ಗೊಂದಲ ಸೃಷ್ಟಿಯಾಯಿತು. ಇದರಿಂದಾಗಿ ಕಾಲ್ತುಳಿತ ಉಂಟಾಗಿ,ಹಲವರು ಉಸಿರಾಟದ ತೊಂದರೆಯಿಂದಾಗಿ ಕುಸಿದು ಬಿದ್ದರು ಎಂದು ತಿಳಿದು ಬಂದಿದೆ.




