Breaking
23 Mar 2026, Mon

ರೈಲು ಡಿಕ್ಕಿ ಹೊಡೆದು ಕೇರಳ ಮೂಲದ ಇಬ್ಬರು ವಿದ್ಯಾರ್ಥಿಗಳು ಸಾವು

ಬೆಂಗಳೂರು : ಹೊರ ವಲಯದ ಚಿಕ್ಕಬಾಣಾವರ ರೈಲು ನಿಲ್ದಾಣದ ಸಮೀಪ ವಂದೇ ಭಾರತ್ ಎಕ್ಸ್​ಪ್ರೆಸ್​​ ರೈಲು ಡಿಕ್ಕಿ ಹೊಡೆದು ಕೇರಳ ಮೂಲದ ವಿದ್ಯಾರ್ಥಿಗಳಿಬ್ಬರು ಸಾವನ್ನಪ್ಪಿದ ಘಟನೆ ನ.23 ರಂದು ನಡೆದಿದೆ.

ಮೃತ ವಿದ್ಯಾರ್ಥಿಗಳನ್ನು ಪ್ರಥಮ ವರ್ಷದ ಬಿ. ಎಸ್ಸಿ ನರ್ಸಿಂಗ್ ವಿದ್ಯಾರ್ಥಿಗಳಾದ ಸ್ಟರ್ಲಿನ್ ಎಲಿಜಾ ಶಾಜಿ (19) ಮತ್ತು ಜಸ್ಟಿನ್ ಜೋಸೆಫ್ (20) ಎಂದು ಗುರುತಿಸಲಾಗಿದೆ.

ಬೆಂಗಳೂರು-ಧಾರವಾಡ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಅತಿ ವೇಗದಲ್ಲಿ ಬಂದು ಇಬ್ಬರು ವಿದ್ಯಾರ್ಥಿಗಳಿಗೆ ಡಿಕ್ಕಿಯಾಗಿದೆ. ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಈ ಬಗ್ಗೆ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *