ಮಂಗಳೂರು: ಯುವಕನೋರ್ವನಿಗೆ 4 ಮಂದಿ ದುಷ್ಕರ್ಮಿಗಳ ತಂಡವೊಂದು ತಲವಾರಿನಿಂದ ದಾಳಿ ನಡೆಸಿದ ಘಟನೆ ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಎಡಪದವು ಎಂಬಲ್ಲಿ ನ.24ರಂದು ನಡೆದಿದೆ.
ಎಡಪದವು ಪೂಪಾಡಿ ಕಲ್ಲು ನಿವಾಸಿ ಅಖಿಲೇಶ್ ತಲವಾರು ದಾಳಿಗೆ ಒಳಗಾದವರು.

ಅಖಿಲೇಶ್ ಅವರು ಎಡಪದವು ಕಡೆಯಿಂದ ಮಂಗಳೂರು ಕಡೆಗೆ ತನ್ನ ಆಕ್ಟಿವಾದಲ್ಲಿ ಹೋಗುತ್ತಿದ್ದ ಸಂದರ್ಭ ಎಡಪದವಿನಲ್ಲಿ ಎರಡು ದ್ವಿಚಕ್ರ ವಾಹನಗಳಲ್ಲಿ ಬಂದಿದ್ದ ನಾಲ್ಕು ಮಂದಿ ದುಷ್ಕರ್ಮಿಗಳ ತಂಡ ದಾಳಿ ಮಾಡಿದೆ.

ಪರಿಣಾಮ ಅಖಿಲೇಶ್ ಅವರ ಬಲಕೈಗೆ ಗಂಭೀರ ಗಾಯವಾಗಿದ್ದು, ಮೂಡುಬಿದಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.
ಈ ಬಗ್ಗೆ ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




