Breaking
26 Sep 2026, Sat

ಉಡುಪಿ: ನೆಲಮಹಡಿಯ ಲಿಫ್ಟ್ ನೊಳಗೆ ಸಿಲುಕಿದ ವಿದ್ಯಾರ್ಥಿಗಳು

ಉಡುಪಿ : ಇಂದ್ರಾಳಿಯ ಯುನೈಟೆಡ್ ಐಕಾನ್ ವಸತಿ ಸಮುಚ್ಚಯದ ಲಿಫ್ಟ್ ನಲ್ಲಿ ಐವರು ವಿದ್ಯಾರ್ಥಿಗಳು ಸಿಲುಕಿ ಪರದಾಡಿದ ಘಟನೆ ಉಡುಪಿಯಲ್ಲಿ ನಡೆದಿದೆ.

ವಸತಿ ಸಮುಚ್ಚಯದಲ್ಲಿ ವಾಸವಾಗಿದ್ದ ವಿದ್ಯಾರ್ಥಿಗಳು ಮಧ್ಯರಾತ್ರಿ ನೆಲಮಹಡಿಯ ಲಿಫ್ಟ್ ನೊಳಗೆ ಸಿಲುಕಿಕೊಂಡಿದ್ದರು. ಹೊರ ಬರಲಾಗದ ಸ್ಥಿತಿಯಲ್ಲಿದ್ದ ವಿದ್ಯಾರ್ಥಿಗಳು ಅವರು ಕೂಡಲೇ ತಮ್ಮ ಸ್ನೇಹಿತರನ್ನು ಸಂಪರ್ಕಿಸಿ, ಉಡುಪಿ ಅಗ್ನಿಶಾಮಕ ದಳದವರಿಗೆ ಮಾಹಿತಿ ನೀಡಲಾಯಿತು. ತಕ್ಷಣವೇ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಇಲಾಖೆ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಅರ್ಧ ಗಂಟೆಯ ಬಳಿಕ ಐವರು ವಿದ್ಯಾರ್ಥಿಗಳನ್ನು ರಕ್ಷಿಸಿದ್ದಾರೆ.

Leave a Reply

Your email address will not be published. Required fields are marked *