Breaking
26 Sep 2026, Sat

ಉಡುಪಿಯಲ್ಲಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ, ಸವಾರ ಸಾವು

ಉಡುಪಿ: ಬೈಕೊಂದು ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಉಡುಪಿಯ ಶಂಕರನಾರಾಯಣ ಗ್ರಾಮದ ಕಲ್ಲಗದ್ದೆ ಎಂಬಲ್ಲಿ ನಡೆದಿದೆ.

ಮೃತರನ್ನು ಸಚಿನ್ ಕಲ್ಲಪ್ಪ್ ಸಂಕ್ರಟ್ಟಿ(28) ಎಂದು ಗುರುತಿಸಲಾಗಿದೆ.

ಸಚಿನ್ ಅವರು ಶಂಕರನಾರಾಯಣ ಪದವಿ ಕಾಲೇಜಿನಲ್ಲಿ ನಡೆಯುತ್ತಿದ್ದ ಸನ್ಮಾನ ಕಾರ್ಯಕ್ರಮಕ್ಕೆ ಬಂದಿದ್ದು, ನಂತರ ಸ್ನೇಹಿತ ಬಸವ ಕಿರಣ ಎಂಬವರನ್ನು ಬಸ್ಸಿಗೆ ಬಿಡಲು ಕುಂದಾಪುರಕ್ಕೆ ಬೈಕಿನಲ್ಲಿ ಹೊರಟಿದ್ದರು. ಈ ವೇಳೆ ಅಂಪಾರು ಮಾರ್ಗವಾಗಿ ಕುಂದಾಪುರಕ್ಕೆ ಹೋಗುತ್ತಿದ್ದಾಗ ಬೈಕ್, ನಿಯಂತ್ರಣ ತಪ್ಪಿ ರಸ್ತೆಯ ಬದಿಯಲ್ಲಿರುವ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಇದರಿಂದ ಗಂಭೀರವಾಗಿ ಗಾಯಗೊಂಡ ಸಚಿನ್ ಅವರನ್ನು ಕುಂದಾಪುರ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಅದಾಗಲೇ ಅವರು ಕೊನೆಯುಸಿರೆಳೆದ್ದಾರೆ ಎಂದು ತಿಳಿದುಬಂದಿದೆ.

ಈ ಬಗ್ಗೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *