Breaking
23 Dec 2024, Mon

ತಿರುಪತಿಯಲ್ಲಿ ಹಿಂದೂಗಳು ಮಾತ್ರ ಕೆಲಸ ಮಾಡಬೇಕು: TTD ನೂತನ ಅಧ್ಯಕ್ಷ ಬಿ.ಆರ್ ನಾಯ್ಡು ಆದೇಶ

ಹೈದರಾಬಾದ್: ತಿರುಪತಿಯಲ್ಲಿ ಕೆಲಸ ಮಾಡುವ ಪ್ರತಿಯೊಬ್ಬರೂ ಹಿಂದೂಗಳಾಗಿರಬೇಕು. ಅದು ನನ್ನ ಮೊದಲ ಪ್ರಯತ್ನವಾಗಿದೆ. ಇದರಲ್ಲಿ ಹಲವು ಸಮಸ್ಯೆಗಳಿವೆ. ನಾವು ಅದನ್ನು ಪರಿಶೀಲಿಸಬೇಕಾಗಿದೆ ಎಂದು ಟಿಟಿಡಿ ಮಂಡಳಿ ಅಧ್ಯಕ್ಷ ಬಿ ಆರ್ ನಾಯ್ಡು ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇತರೆ ಧರ್ಮದ ಸಿಬ್ಬಂದಿಯನ್ನು ಹೇಗೆ ನಿಭಾಯಿಸಬೇಕು, ಅವರನ್ನು ಬೇರೆ ಸರ್ಕಾರಿ ಇಲಾಖೆಗಳಿಗೆ ಕಳುಹಿಸಬೇಕೇ ಅಥವಾ ಸ್ವಯಂ ನಿವೃತ್ತಿ ಯೋಜನೆ ನೀಡಬೇಕೇ ಎಂಬ ಕುರಿತು ಆಂಧ್ರಪ್ರದೇಶ ಸರ್ಕಾರದೊಂದಿಗೆ ಚರ್ಚಿಸುವುದಾಗಿ ಹೇಳಿದರು.

ವೆಂಕಟೇಶ್ವರ ದೇವರ ಕಟ್ಟಾ ಭಕ್ತರಾದ ನಾಯ್ಡು, ಮಂಡಳಿಯ ಮುಖ್ಯಸ್ಥರ ಜವಾಬ್ದಾರಿಯನ್ನು ನೀಡಿದ್ದಕ್ಕಾಗಿ ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಮತ್ತು ರಾಜ್ಯದ ಎನ್‌ಡಿಎ ಸರ್ಕಾರದ ಇತರ ನಾಯಕರಿಗೆ ಧನ್ಯವಾದ ಅರ್ಪಿಸಿದರು.ಆಂಧ್ರಪ್ರದೇಶ ಸರ್ಕಾರ ಟಿಟಿಡಿಗೆ 24 ಸದಸ್ಯರನ್ನು ಒಳಗೊಂಡ ನೂತನ ಸಮಿತಿಯನ್ನು ರಚಿಸಿದ್ದು, ಅದಕ್ಕೆ ನಾಯ್ಡು ಅವರನ್ನು ಅಧ್ಯಕ್ಷರನ್ನಾಗಿ ನೇಮಿಸಿದೆ

Leave a Reply

Your email address will not be published. Required fields are marked *