Breaking
10 May 2026, Sun

ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಮಂಗಳೂರು: ಕೊಲೆ ಪ್ರಕರಣ ಸೇರಿದಂತೆ ಹಲವು ಪ್ರಕರಣದಲ್ಲಿ ಭಾಗಿಯಾಗಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ಉತ್ತರ ಉಪವಿಭಾಗದ ಎಸಿಪಿ ನೇತೃತ್ವದ ತಂಡ ಬಂಧಿಸಿದೆ.

ಬಂಧಿತ ಆರೋಪಿಯನ್ನು ಬೆಳ್ತಂಗಡಿಯ ಮುಗಳಿ ಹೊಸ ಮನೆ ನಿವಾಸಿ ಟಿ. ದಿನೇಶ್ ಶೆಟ್ಟಿ ಯಾನೆ ದಿನ್ನು ಎಂದು ಗುರುತಿಸಲಾಗಿದೆ.

ಭೂಗತ ಲೋಕದ ಪಾತಕಿ ರವಿ ಪೂಜಾರಿ ಮತ್ತು ಕಲಿ ಯೊಗೀಶ್ ಇವರಿಂದ ಸುಪಾರಿ ಪಡೆದು ನ್ಯಾಯವಾದಿ ಖಾಸೀಂ ನೌಷಾದ್ ನನ್ನು ಕೊಲೆ ಮಾಡಿದ ಆರೋಪದ ಮೇರೆಗೆ ಮಾನ್ಯ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿತ್ತು. ಸುಮಾರು 11 ವರ್ಷ ಕಾರಾಗೃಹ ಶಿಕ್ಷೆ ಅನುಭವಿಸಿ ನಂತರ ಮಾನ್ಯ ಉಚ್ಚ ನ್ಯಾಯಾಲಯಕ್ಕೆ ಅಫೀಲು ಸಲ್ಲಿಸಿ ಡಿಸೆಂಬರ್ 2019 ರಲ್ಲಿ ಬಿಡುಗಡೆಗೊಂಡಿದ್ದಾನೆ.

ಬಿಡುಗಡೆಯ ನಂತರವೂ ಅಪಹರಣ ಪ್ರಕರಣ, ವಂಚನೆ ಪ್ರಕರಣ ಮತ್ತು ಸುಲಿಗೆ ಪ್ರಕರಣಗಳಲ್ಲಿಯೂ ಭಾಗಿಯಾಗಿ ನ್ಯಾಯಾಲಯಕ್ಕೆ ಹಾಜರಾಗದ ಕಳೆದ ಒಂದೂವರೆ ವರ್ಷದಿಂದ ತಲೆಮರೆಸಿಕೊಂಡವನನ್ನು ಮಂಗಳವಾರದಂದು ಮಂಗಳೂರು ಉತ್ತರ ಉಪವಿಭಾಗದ ಎಸಿಪಿ ಹಾಗೂ ಅವರ ತಂಡ ಆರೋಪಿಯನ್ನು ದಸ್ತಗಿರಿ ಮಾಡಿದ್ದಾರೆ.

Leave a Reply

Your email address will not be published. Required fields are marked *