Breaking
9 Aug 2026, Sun

ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೇ ಸಾವು

ಉಳ್ಳಾಲ: ಚಿಕ್ಕಮಗಳೂರಿನ ಎನ್‌.ಆರ್‌.ಪುರದಲ್ಲಿ ನಡೆದ ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಘಟನೆ ನ.26 ರಂದು ನಡೆದಿದೆ.

ಮೃತಪಟ್ಟ ವ್ಯಕ್ತಿಯನ್ನು ಕಿನ್ಯದ ಮೀಂಪ್ರಿಯ ಮಂಜನಾಡಿ ನಿವಾಸಿ, ಮಂಜನಾಡಿ ಇಬ್ರಾಹೀಂ ಮದನಿ ಕಾಮಿಲ್ ಸಖಾಫಿ ಎಂಬವರ ಪುತ್ರ ಜಲಾಲುದ್ದೀನ್ ಹುಮೈದಿ(28) ಎಂದು ಗುರುತಿಸಲಾಗಿದೆ.

ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಹುಮೈದಿ ಅವರನ್ನು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ಚಿಕಿತ್ಸೆ ಫಲಕರಿಯಾಗದೇ ಕೊನೆಯುಸಿರೆಳೆದಿದ್ದಾರೆಂದು ತಿಳಿದುಬಂದಿದೆ.

ಮೃತರು ತಂದೆ ತಾಯಿ, ಪತ್ನಿ ಹಾಗೂ ಪುತ್ರನನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *