ಕುಂದಾಪುರ : ಯಕ್ಷಗಾನ ಕ್ಷೇತ್ರದಲ್ಲಿ ‘ಕಂದಾವರ’ ಎಂಬ ಹೆಸರಿನಿಂದ ಚಿರಪರಿಚಿತರಾದ ರಘುರಾಮ ಶೆಟ್ಟಿ ನ. 26 ರಂದು ಬೆಳಗ್ಗೆ ನಿಧನರಾಗಿದ್ದಾರೆ.
ಕುಂದಾಪುರ ತಾಲೂಕಿನ ಬಳ್ಕೂರು ಗ್ರಾಮದ ಕಂದಾವರದ ಯಕ್ಷಗಾನ ಪ್ರಸಂಗಕರ್ತ ಹಾಗೂ ನಿವೃತ್ತ ಶಿಕ್ಷಕ ಕಂದಾವರ ರಘುರಾಮ ಶೆಟ್ಟಿ (89). ಕಂಡ್ಲೂರಿನ ನೇತಾಜಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸುಮಾರು 35 ವರ್ಷಗಳ ಕಾಲ ಸಹಾಯಕ ಶಿಕ್ಷಕರಾಗಿ ಹಾಗೂ ಮುಖ್ಯೋಪಾಧ್ಯಾಯರಾಗಿ ಸೇವೆ ಸಲ್ಲಿಸಿದ್ದಾರೆ. ಅವರ ಸೇವಾ ಅವಧಿಯಲ್ಲಿ ‘ಮಾದರಿ ಶಿಕ್ಷಕ’ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ.

ಚೆಲುವೆ ಚಿತ್ರಾವತಿ, ರತಿ ರೇಖಾ, ಶ್ರೀ ದೇವಿ ಬನಶಂಕರಿ ಮತ್ತು ಶೂದ್ರ ತಪಸ್ವಿನಿಯಂತಹ ಪ್ರಸಂಗಗಳು ರಚಿಸಿದ್ದು ಭಾರಿ ಮೆಚ್ಚುಗೆ ವ್ಯಕ್ತವಾಗಿದೆ.
ಮೃತರು ಪತ್ನಿ, ಮಕ್ಕಳು, ಮೊಮ್ಮಕ್ಕಳು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.





