ಬಂಟ್ವಾಳ : ತಾಲೂಕಿನ ನೇತ್ರಾವತಿ ನದಿಯಲ್ಲಿ ಅಪರಿಚಿತ ಮಹಿಳೆಯ ಶವವೊಂದು ಪತ್ತೆಯಾದ ಘಟನೆ ನ.27 ರಂದು ನಡೆದಿದೆ.

ಅಂದಾಜು 60 ವರ್ಷ ವಯಸ್ಸಿನ ಮಹಿಳೆಯ ಮೃತದೇಹ ಪತ್ತೆಯಾಗಿದ್ದು, ಸ್ಥಳೀಯರು ಮೃತದೇಹವನ್ನು ಮೇಲಕ್ಕೆತ್ತಿದ್ದು , ಬಂಟ್ವಾಳ ಸರಕಾರಿ ಆಸ್ಪತ್ರೆಯ ಶವಗಾರದಲ್ಲಿಡಲಾಗಿದೆ ಎಂದು ಬಂಟ್ವಾಳ ನಗರ ಪೋಲೀಸ್ ಠಾಣೆಯ ಎಸ್. ಐ.ಸಂದೀಪ್ ಶೆಟ್ಟಿ ತಿಳಿಸಿದ್ದಾರೆ.
ಮಹಿಳೆ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಹೇಳಲಾಗಿದೆ.


ಮೃತದೇಹದ ಗುರುತು ಪತ್ತೆಗಾಗಿ ಬಂಟ್ವಾಳ ಪೋಲೀಸರು ಮನವಿ ಮಾಡಿದ್ದು, ಮಹಿಳೆಯ ಸಂಬಂಧಿಕರು ಬಂಟ್ವಾಳ ನಗರ ಪೋಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ತಿಳಿಸಿದ್ದಾರೆ.




