ಬಂಟ್ವಾಳ: ನಮ್ಮ ಜವನೆರ್ ಸೇವಾ ಟ್ರಸ್ಟ್ (ರಿ.) ರಾಯಿ ಇದರ ವಾರ್ಷಿಕೋತ್ಸವ ಪ್ರಯುಕ್ತ ಬೃಹತ್ ಆರೋಗ್ಯ ಶಿಬಿರ ಮತ್ತು ರಕ್ತದಾನ ಶಿಬಿರ , ಸಾಂಸ್ಕೃತಿಕ ಕಾರ್ಯಕ್ರಮ ಮತ್ತು ಭಾರತೀಯ ಅಂಚೆ ಇಲಾಖೆ ಪುತ್ತೂರು ವಿಭಾಗ ಇದರ ಸಹಯೋಗದಲ್ಲಿ ಆಧಾರ್ ನೋಂದಾವಣಿ ಮತ್ತು ತಿದ್ದುಪಡಿ ಹಾಗೂ ಸಮಗ್ರ ರಕ್ಷಣಾ ಯೋಜನೆ (ಅಪಘಾತ ವಿಮೆ) ಅಂಚೆ ಜನಸಂಪರ್ಕ ಅಭಿಯಾನವು ನ. 30 ರಂದು ಶ್ರೀಯಾ ಗಾರ್ಡನ್ ರಾಯಿಯಲ್ಲಿ ನಡೆಯಲಿದೆ.

ಬೆಳಿಗ್ಗೆ 9 ಗಂಟೆಗೆ ಉದ್ಘಾಟನಾ ಕಾರ್ಯಕ್ರಮ ನಡೆಯಲಿದ್ದು ಮಾವಂತೂರು ಬಲವಂಡಿ ಪಿಲಿಚಂಡಿ ಕ್ಷೇತ್ರದ ಗಡಿಪ್ರಧಾನರಾದ ದುರ್ಗಾದಾಸ್ ಶೆಟ್ಟಿ ಮಾವಂತೂರು ಅವರು ಅದ್ಯಕ್ಷತೆ ವಹಿಸಲಿದ್ದಾರೆ. ಶ್ರೀ ಕ್ಷೇತ್ರ ರಾಯಿಯ ಪ್ರಧಾನ ಅರ್ಚಕರು ಡಿ. ರಾಮಚಂದ್ರ ಭಟ್ ದೈಲ ದೀಪ ಪ್ರಜ್ವಲನೆ ಮಾಡಲಿದ್ದಾರೆ. ಮುಖ್ಯ ಅತಿಥಿಯಾಗಿ ಸಿದ್ದಕಟ್ಟೆ ವ್ಯವಸಾಯ ಸೇವಾ ಸಹಕಾರಿ ಸಂಘ ನಿ. ಅಧ್ಯಕ್ಷರು ಪ್ರಭಾಕರು ಪ್ರಭು, ರಾಯಿ ಗ್ರಾಮ ಪಂಚಾಯತ್ ನ ಅಭಿವೃದ್ದಿ ಅಧಿಕಾರಿ ದರ್ಮರಾಜ್ ದಡ್ಡು, ಸಿದ್ದಕಟ್ಟೆ ಅನಂತ ಪದ್ಮ ಹೆಲ್ತ್ ವೈದ್ಯರು ಸುದೀಪ್ ಕುಮಾರ್ ರಾಯಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಆಚರಣಾ ಸಮಿತಿಯ ಅದ್ಯಕ್ಷರು ಸದಾನಂದ ಶೆಟ್ಟಿ ಮುಡ್ರಾಯಿಬೀಡು ರಾಯಿ ಸೇರಿದಂತೆ ಅನೇಕರು ಭಾಗವಹಿಸಲಿದ್ದಾರೆ.

ರಾತ್ರಿ 7 ಗಂಟೆಗೆ ಸಭಾ ಕಾರ್ಯಕ್ರಮ ನಡೆಯಲಿದ್ದು ಬಂಟ್ವಾಳ ವಿಧಾನ ಸಭಾ ಕ್ಷೇತ್ರದ ಮಾನ್ಯ ಶಾಸಕರು ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಇದರ ಅದ್ಯಕ್ಷತೆಯನ್ನು ವಹಿಸಲಿದ್ದಾರೆ. ಉದ್ಘಾಟನೆಯನ್ನು ದ.ಕ. ಸಂಸದರು ಕ್ಯಾಪ್ಟನ್ ಬ್ರಿಜೇಶ್ ಚೌಟ ನೆರವೇರಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ವಿಧಾನಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು, ದ.ಕ ಜಿಲ್ಲಾ ಬಿಜೆಪಿ ಪ್ರಮುಖರು ಸಂದೇಶ ಶೆಟ್ಟಿ, ಸುರೇಶ್ ಶೆಟ್ಟಿ ಮಿಜಾರು, ಬಂಟ್ವಾಳ ತಾಲೂಕು ಬಿಲ್ಲವರ ಸಂಘದ ಅದ್ಯಕ್ಷರು ಭುವನೇಶ್ ಪಚಿನಡ್ಕ, ಉದ್ಯಮಿ ನಾರಾಯಣ ಶೆಟ್ಟಿ ಮೂಡಬಿದ್ರೆ, ಮಂಗಳೂರು ಮಹಾನಗರ ಪಾಲಿಕೆಯ ನಿಕಟ ಪೂರ್ವ ಸದಸ್ಯರಾದ ಕಿಶೋರ್ ಕುಮಾರ್ ಕೊಡಿಕಲ್ ಸೇರಿದಂತೆ ಅನೇಕರು ಭಾಗವಹಿಸಲಿದ್ದಾರೆ.

ಸಂಜೆ 7.30 ರಿಂದ ಶಾರದಾ ಆರ್ಟ್ಸ್ ಕಲಾವಿದರು(ರಿ.) ಮಂಜೇಶ್ವರ ಅಭಿನಯದ “ಕಥೆ ಎಡ್ಡೆಂಡು” ನಾಟಕ ಪ್ರದರ್ಶನ ನಡೆಯಲಿದೆ.





