Breaking
19 Sep 2026, Sat

ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿ ಪೊಲೀಸ್‌ ವಶಕ್ಕೆ

ಬೆಳ್ತಂಗಡಿ: ಅಪ್ರಾಪ್ತ ವಯಸ್ಸಿನ ಬಾಲಕಿಯೊಂದಿಗೆ ಒತ್ತಾಯಪೂರ್ವಕವಾಗಿ ಲೈಂಗಿಕ ದೌರ್ಜನ್ಯ ನಡೆಸಿ ಗರ್ಭವತಿ ಮಾಡಿದ ಆರೋಪಿಯನ್ನು ವೇಣೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬಾಲಕಿಯನ್ನು ಮದುವೆಯಾಗುವುದಾಗಿ ನಂಬಿಸಿ ಹಲವು ಬಾರಿ ಮನೆಗೆ ಕರೆದುಕೊಂಡು ಹೋಗಿ ಲೈಂಗಿಕ ಸಂಪರ್ಕ ಬೆಳೆಸಿದ್ದ ಎಂದು ಹೇಳಲಾಗಿದೆ. ಬಳಿಕ ಬಾಲಕಿಯ ಆರೋಗ್ಯದಲ್ಲಿ ಏರುಪೇರು ಕಂಡುಬಂದಿದ್ದು ಕುಟುಂಬಸ್ಥರು ಆಕೆಯನ್ನು ವೇಣೂರು ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋದಾಗ ವೈದ್ಯರು ಪರೀಕ್ಷಿಸಿ ಆಕೆ ಎರಡೂವರೆ ತಿಂಗಳ ಗರ್ಭವತಿ ಎಂದು ತಿಳಿಸಿದ್ದಾರೆ.

ಈ ಕುರಿತು ಆರೋಪಿಯ ವಿರುದ್ಧ ವೇಣೂರು ಪೊಲೀಸ್‌ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *