ತುಂಬೆ ಗ್ರಾಮ ಪಂಚಾಯತ್ ಮಾಜಿ ಸದಸ್ಯ ಸೋಮಪ್ಪ ಕೋಟ್ಯಾನ್ ನಿಧನ

ಬಂಟ್ವಾಳ: ಅಲ್ಪಕಾಲದ ಅನಾರೋಗ್ಯದಿಂದ ತುಂಬೆ ಗ್ರಾಮ ಪಂಚಾಯತ್ ಮಾಜಿ ಸದಸ್ಯ ಸೋಮಪ್ಪ ಕೋಟ್ಯಾನ್ ಅವರು ನಿಧನರಾಗಿದ್ದಾರೆ.

ಬಿಜೆಪಿಯ ಸಕ್ರಿಯ ಕಾರ್ಯಕರ್ತನಾಗಿದ್ದ ಸೋಮಪ್ಪ ಹುಟ್ಟು ಹೋರಾಟಗಾರರಾಗಿ, ಬಂಟ್ವಾಳ ತಾಲೂಕು ಪಂಚಾಯತ್ ನ ಮಾಜಿ ಸದಸ್ಯರಾಗಿ ಜನಪ್ರಿಯರಾಗಿದ್ದರು. ಕಳೆದ 25 ವರ್ಷಗಳಿಂದ ತುಂಬೆ ಶ್ರೀ ಶಾರದಾ ಸೇವಾ ಪ್ರತಿಷ್ಠಾನದ ಕೋಶಾಧಿಕಾರಿಯಾಗಿ, ಬಿಲ್ಲವ ಸಮಾಜದ ಗುರಿಕಾರರಾಗಿ, ಯುವ ಸಮುದಾಯದ ಮಾರ್ಗದರ್ಶಕರಾಗಿ ಸೇವೆ ಸಲ್ಲಿಸಿದ್ದಾರೆ.

ಮೃತರು ಪತ್ನಿ ಹಾಗೂ ಎರಡು ಗಂಡು, ಒಂದು ಹೆಣ್ಣು ಮಕ್ಕಳ ಸಹಿತ ಅನೇಕ ಬಂಧುಬಳಗವನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *