Breaking
22 Jun 2026, Mon

ಎರಡು ಕಾರುಗಳ ನಡುವೆ ಭೀಕರ ಅಪಘಾತ: ಐವರು ಸ್ಥಳದಲ್ಲೇ ಸಾವು

ಆಂಧ್ರಪ್ರದೇಶ: ಎರಡು ಕಾರುಗಳ ನಡುವೆ ಡಿಕ್ಕಿಯಾಗಿ ಒಂದೇ ಕಾರಿನಲ್ಲಿದ್ದ ಇಬ್ಬರು ಮಕ್ಕಳು ಸೇರಿ ಐವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಆಂಧ್ರದ ಎಮ್ಮಿಗನೂರು ತಾಲೂಕಿನ ಕೋಟೆಕಲ್‌ ಗ್ರಾಮದಲ್ಲಿ ಇಂದು ಮುಂಜಾನೆ ನಡೆದಿದೆ.

ಮೃತಪಟ್ಟವರನ್ನು ಕೋಲಾರದ ಚಿಕ್ಕಹೊಸಳ್ಳಿ ಗ್ರಾಮದ ನಿವಾಸಿಗಳು ಎಂದು ಗುರುತಿಸಲಾಗಿದೆ.

ಮಂತ್ರಾಲಯದಿಂದ ರಾಘವೇಂದ್ರ ಸ್ವಾಮಿಯ ದರ್ಶನ ಮುಗಿಸಿಕೊಂಡು ಊರಿನ ಕಡೆಗೆ ವಾಪಸಾಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಇನ್ನೊಂದು ಕಾರಿನಲ್ಲಿದ್ದವರಿಗೆ ಗಾಯಗಳಾಗಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

Leave a Reply

Your email address will not be published. Required fields are marked *