Breaking
21 Mar 2026, Sat

ಸುಳ್ಯ : ಗುಂಡೇಟು ತಗುಲಿ ಕಡವೆ ಸಾವು

ಸುಳ್ಯ : ಕಡವೆಯ ಮೃತದೇಹವೊಂದು ರಸ್ತೆ ಬದಿಯಲ್ಲಿ ಪತ್ತೆಯಾದ ಘಟನೆ ಸುಳ್ಯ ತಾಲೂಕಿನ ಪೆರಾಜೆ-ನಿಡ್ಯಮಲೆ ಸಮೀಪದ ಪಾನತ್ತಿಲ ಎಂಬಲ್ಲಿ ನ.27 ರಂದು ನಡೆದಿದೆ.

ಬೇಟೆಗಾರರು ಕಡವೆಗೆ ಗುಂಡು ಹಾರಿಸಿದ್ದು, ಇದರಿಂದ ಅದು ರಸ್ತೆ ಬದಿ ಬಂದು ಬಿದ್ದಿದೆ ಎಂದು ಶಂಕಿಸಲಾಗಿದೆ.

ರಸ್ತೆಯ ಬದಿಯಲ್ಲಿ ಕಡವೆ ಬಿದ್ದಿರುವುದನ್ನು ಗಮನಿಸಿದ ಸ್ಥಳೀಯ ನಿವಾಸಿಗಳು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದು, ಸಂಪಾಜೆ ಅರಣ್ಯ ಇಲಾಖೆಯ ಅಧಿಕಾರಿಗಳು ಸತ್ತ ಕಡವೆಯನ್ನು ವಶಕ್ಕೆ ಪಡೆದಿದ್ದಾರೆ.

ಈ ಕುರಿತು ಘಟನೆಗೆ ಸಂಬಂಧಿಸಿದಂತೆ ಹಲವರನ್ನು ವಿಚಾರಣೆ ನಡೆಸಿದ್ದಾರೆ.

Leave a Reply

Your email address will not be published. Required fields are marked *