Breaking
22 Mar 2026, Sun

ಟೆಂಪೋ ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೆ ಸಾವು

ಉಡುಪಿ: ಪಡುಬಿದ್ರಿಯಲ್ಲಿ ಟೆಂಪೋ ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡಿದ್ದ ವಿದ್ಯಾರ್ಥಿನಿಯೋರ್ವಳು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ಘಟನೆ ನಡೆದಿದೆ.

ಮೃತಪಟ್ಟ ವಿದ್ಯಾರ್ಥಿಯನ್ನು ಪಡುಬಿದ್ರಿ ನಡ್ಸಾಲು ಬಿಲ್ಲಿತೋಟ ನಿವಾಸಿ ಪ್ರೇಕ್ಷಾ(22) ಎಂದು ಗುರುತಿಸಲಾಗಿದೆ. ಅವರು ವಾಮಂಜೂರಿನ ಕರಾವಳಿ ಕಾಲೇಜಿನ ವಿದ್ಯಾರ್ಥಿಯಾಗಿದ್ದರು. ಪರೀಕ್ಷೆ ಮುಗಿಸಿ ಮನೆಗೆ ಹಿಂದಿರುಗುವಾಗ ಈ ಅವಘಡ ಸಂಭವಿಸಿದೆ.

ಪ್ರೇಕ್ಷಾ ಅವರು ಸರ್ವಿಸ್ ರಸ್ತೆಯನ್ನು ದಾಟುತ್ತಿದ್ದಾಗ, ಉಡುಪಿ ಕಡೆಯಿಂದ ಬರುತ್ತಿದ್ದ ಸರಕು ಸಾಗಣೆ ಟೆಂಪೋ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಅವರು ರಸ್ತೆಗೆ ಬಿದ್ದು ತಲೆಗೆ ತೀವ್ರ ಗಾಯಗೊಂಡಿದ್ದರು. ಸ್ಥಳೀಯರು ತಕ್ಷಣ ಅವರನ್ನು ಆಸ್ಪತ್ರೆಗೆ ಸಾಗಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

ಈ ಬಗ್ಗೆ ಪಡುಬಿದ್ರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೃತರು ತಾಯಿ ಮತ್ತು ಹಿರಿಯ ಸಹೋದರನನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *