ಉಡುಪಿ: ಕಾಪು ಸಮೀಪದ ಕೋತಲ್‌ಕಟ್ಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಗೂಡ್ಸ್ ಟೆಂಪೋ ಪಲ್ಟಿಯಾಗಿ ಐವರು ಮೃತಪಟ್ಟು ಹಲವು ಮಂದಿ ಗಾಯಗೊಂಡ ಘಟನೆ ನ.30 ರಂದು ನಡೆದಿದೆ.

ಕಾಪು ಮಜೂರಿನಿಂದ ಮಲ್ಪೆಗೆ ಡೆಕರೋಷನ್ ಸಂಬಂಧಿಸಿದ ಸಲಕರಣೆಗಳನ್ನು ಸಾಗಿಸುತ್ತಿದ್ದ ವೇಳೆ ಟೆಂಪೋ ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿಯ ಡಿವೈಡರ್‌ಗೆ ಏರಿ ರಸ್ತೆಯಲ್ಲಿ ಪಲ್ಟಿಯಾಗಿದೆ. ವಾಹನದಲ್ಲಿ ಒಟ್ಟು 9 ಮಂದಿ ಕೆಲಸಗಾರರು ಇದ್ದು, ಅವರಲ್ಲಿ ಹಲವು ಮಂದಿ ಗಂಭೀರವಾಗಿ ಗಾಯಗಳಾಗಿದೆ.

ಘಟನಾ ಸ್ಥಳದಲ್ಲೇ ಇಬ್ಬರು ಕಾರ್ಮಿಕರು ಮೃತಪಟ್ಟಿದ್ದು ನಾಲ್ವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೂವರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಘಟನಾ ಸ್ಥಳಕ್ಕೆ ಕಾಪು ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿದ್ದಾರೆ.






